ಉಡುಪಿ: ಕೊರೊನಾ ಸಂಕಷ್ಟ ಕಾಲದಲ್ಲಿ ಉಡುಪಿ ಶ್ರೀಕೃಷ್ಣ ಮಠ ಸಾಲ ಮಾಡಲು ಮುಂದಾಗಿದೆ. ಮಠದ ನಿರ್ವಹಣೆಗೆ ಒಂದು ಕೋಟಿ ರೂ. ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದಾರೆ. ಕೃಷ್ಣಮಠ ಸಾಲ ಮಾಡಲು ಮುಂದಾಗಿದ್ದು ಮಠದ ಭಕ್ತರಿಗೆ ನೋವುಂಟು ಮಾಡಿದೆ.
ಉಡುಪಿ ಕೃಷ್ಣಮಠದ ಪರ್ಯಾಯ ಅದಮಾರು ಮಠ ಕಳೆದ ಐದು ತಿಂಗಳಿಂದ ತೆರೆದಿಲ್ಲ. ಯಾವುದೇ ಧಾರ್ಮಿಕ ಸೇವೆ ನಡೆಯದೆ ಆರ್ಥಿಕ ಚಟುವಟಿಕೆ ಆರಂಭವಾಗಿದೆ. ದಿನಕ್ಕೆ ಒಂದೂವರೆ ಲಕ್ಷ ರೂ. ಖರ್ಚು ಬರುತ್ತಿದೆ. ಈ ಬಗ್ಗೆ ಪರ್ಯಾಯ ಅದಮಾರು ಮಠಾಧೀಶ ಈಶಪ್ರೀಯ ತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
ಕೊರೊನಾ ಕಾಲದಲ್ಲಿ ಹಲವಾರು ಸಂಸ್ಥೆಗಳಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ದೊಡ್ಡ ಕಂಪನಿಗಳು ಕೂಡ ನಷ್ಟದಲ್ಲಿದೆ. ನಿರ್ವಹಣೆ ಮಾಡಲು ಸಾಧ್ಯವಾಗದಷ್ಟು ಸಮಸ್ಯೆಗಳಲ್ಲಿ ಜನ ಇದ್ದಾರೆ. ಪ್ರತಿವರ್ಷ ಮಠದಿಂದ ಶೈಕ್ಷಣಿಕ ಸಂಸ್ಥೆಗಳಿಗೆ ಹಣದ ಹರಿವು ಹೋಗುತ್ತಿದ್ದು. ಶಿಕ್ಷಣ ಸಂಸ್ಥೆಗಳಿಂದ ಈವರೆಗೆ ಹಣವನ್ನು ಮಠದ ಬಳಕೆಗೆ ಉಪಯೋಗ ಮಾಡಿಲ್ಲ.