Breaking News

ಇಬ್ರಾಹಿಂ ನಿವಾಸಕ್ಕೆ ಜಮೀರ್ ದಿಢೀರ್ ಭೇಟಿ

Spread the love

ಬೆಂಗಳೂರು: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಇವತ್ತು ಸಿ.ಎಂ.ಇಬ್ರಾಹಿಂ ನಿವಾಸಕ್ಕೆ ಚಾಮರಾಜಪೇಟೆಯ ಕಾಂಗ್ರೆಸ್‌ ಶಾಸಕ ಜಮೀರ್ ಅಹಮದ್ ಭೇಟಿ ಕೊಟ್ಟಿದ್ದರು. ಬೆಂಗಳೂರಿನಲ್ಲಿರುವ ಜಯಮಹಲ್ ನಿವಾಸದಲ್ಲಿ ಭೇಟಿಯಾಗಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಇಬ್ರಾಹಿಂ ಜೊತೆ ಮಹತ್ವದ ಮಾತುಕತೆ ನಡೆಸಿದರು.

ಸುಮಾರು 20 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದು, ಇಬ್ಬರ ಮಾತುಕತೆ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್‌ಗೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿರುವುದಾಗಿ ಘೋಷಣೆ ಮಾಡಿದ್ದರೂ ಕಾಂಗ್ರೆಸ್ ತೊರೆಯದಂತೆ ಜಮೀರ್ ಮನವೊಲಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಹಿಜಬ್ ವಿಚಾರವಾಗಿಯೂ ಮುಸ್ಲಿಂ ಮುಖಂಡರು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದು ಮಹತ್ವದ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿಯೂ ಇದೆ.ಸಿ.ಎಂ.ಇಬ್ರಾಹಿಂ ರಾಜೀನಾಮೆ ಕೊಟ್ಟಿದ್ದರೂ ಸಹ ಕಾಂಗ್ರೆಸ್‌ನಿಂದ ರಾಜೀನಾಮೆ ಅಂಗೀಕಾರದ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಮೊನ್ನೆಯಷ್ಟೇ ವಿಧಾನಸೌಧದ ಕಾರಿಡಾರ್‌ನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೋಗುತ್ತಿದ್ದಾಗ ಇಬ್ರಾಹಿಂ ಎದುರು ಸಿಕ್ಕಾಗ ಸುಮ್ನೆ ಅರ್ಜೆಂಟ್ ಮಾಡ್ಬೇಡ ಸುಮ್ಮನಿರು ಎಂದು ಹೇಳಿದ್ದರು. 


Spread the love

About Laxminews 24x7

Check Also

ಬೆಂಗಳೂರು -ವಿಜಯಪುರ ರೈಲು ಸಂಚಾರಕ್ಕೆ ಹೊಸ ದಿಕ್ಕು! : ಸಚಿವ ಎಂ.ಬಿ.ಪಾಟೀಲ

Spread the love ಬೆಂಗಳೂರು -ವಿಜಯಪುರ ರೈಲು ಸಂಚಾರಕ್ಕೆ ಹೊಸ ದಿಕ್ಕು! : ಸಚಿವ ಎಂ.ಬಿ.ಪಾಟೀಲ ಕ್ರಿಸ್ಮಸ್ ಮತ್ತು ವರ್ಷಾಂತ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ