ಚಂಡೀಗಡ: ಪಂಜಾಬ್‍ನ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ `ಭ್ರಷ್ಟಾಚಾರ ಮುಕ್ತ’ ಸಹಾಯವಾಣಿ ಪ್ರಾರಂಭಿಸುತ್ತಿದ್ದು, ಮಾರ್ಚ್ 23ರಂದು ಅನಾವರಣಗೊಳ್ಳಲಿದೆ.
ಸ್ವಾತಂತ್ರ್ಯ ಹೋರಾಟಗಾರ ಭಗತ್‍ಸಿಂಗ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮಾರ್ಚ್ 23ರಂದು ಸಹಾಯವಾಣಿ ಪ್ರಾರಂಭಿಸಲಾಗುತ್ತದೆ ಎಂದೂ ಅವರು ಭರವಸೆ ನೀಡಿದ್ದಾರೆ.
ಸಹಾಯವಾಣಿ ಸಂಖ್ಯೆಯು ನನ್ನ ವೈಯಕ್ತಿಕ ಸಂಪರ್ಕ ಸಂಖ್ಯೆಯಾಗಿದ್ದು, ಯಾರೇ ಲಂಚ ಕೇಳಿದರೂ ಅದರ ಆಡಿಯೋ, ವಿಡಿಯೋ ಅನ್ನು ಈ ಸಂಖ್ಯೆಗೆ ಕಳುಹಿಸಿ’ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಯಾವುದೇ ಸರ್ಕಾರಿ ಅಧಿಕಾರಿಗಳಿಗೆ ತೊಂದರೆ ಕೊಡಬೇಕು ಎನ್ನುವುದು ನನ್ನ ಉದ್ದೇಶವಲ್ಲ. ಶೇ.99 ಸರ್ಕಾರಿ ನೌಕರರು ಪ್ರಾಮಾಣಿಕರಾಗಿದ್ದಾರೆ. ಆದರೆ, ಶೇ.1 ರಷ್ಟು ನೌಕರರು ಭ್ರಷ್ಟರಾಗಿದ್ದಾರೆ. ಎಎಪ್ ನಿಂದ ಮಾತ್ರ ಈ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯ ಆದ್ದರಿಂದ ಈ ಸಹಾಯವಾಣಿ ಆರಂಭಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Laxmi News 24×7