Breaking News

ಪೊಲೀಸ್​​ ಕಾನ್ಸ್​ಟೇಬಲ್​ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ವಿರುದ್ಧ ಪ್ರಕರಣ​ ದಾಖಲಾಗಿದೆ.

Spread the love

ಗದಗ: ಕಿರುಕುಳಕ್ಕೆ ಬೇಸತ್ತು ಪೊಲೀಸ್​​ ಕಾನ್ಸ್​ಟೇಬಲ್​ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ.

 

ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್​​ ಠಾಣೆಯ ಕಾನ್ಸ್​ಟೇಬಲ್ ಆಗಿದ್ದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅರ್ಜುನ್ ಪಾಟೀಲ್ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಆರೇಳು ಪುಟಗಳ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ದುಷ್ಕರ್ಮಿಗಳ ಕಿರುಕುಳ ಹೆಚ್ಚಾಗಿದ್ದು, ಮಾನಸಿಕ ಹಿಂಸೆ ತಾಳದೇ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಎಂದಿನಂತೆ ಡ್ಯೂಟಿಗೆ ಹೋಗಬೇಕು ಎಂದು ಊಟದ ಬಾಕ್ಸ್​ ಕಟ್ಟಿಕೊಂಡಿದ್ದ. ಪತ್ನಿ ಹಾಗೂ ತಂದೆ ತಾಯಿ ಸೇರಿದಂತೆ ಕುಟುಂಬಸ್ಥರು ಧಾರವಾಡಕ್ಕೆ ಹೋಗಿದ್ದರು. ಈ ವೇಳೆ, ಮನೆಯಲ್ಲಿ ಯಾರೂ ಇರಲಿಲ್ಲ. ಅರ್ಜುನ್ ಪಾಟೀಲ್​ಗೆ ಯಾವುದೋ ಸಂದೇಶ ಬಂದಿದ್ದು, ಬಳಿಕ ಮನೆಯಲ್ಲೇ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಅರ್ಜುನ್ ಪಾಟೀಲ್​ಗೆ ಪತ್ನಿ, ಇಬ್ಬರು ಮಕ್ಕಳು, ತಂದೆ-ತಾಯಿ‌ ಇದ್ದರು. ಲಕ್ಕುಂಡಿ ಗ್ರಾಮದಲ್ಲಿ ಪಾರ್ಥಿವ ಶರೀರಕ್ಕೆ ಪೊಲೀಸ್​​ ಇಲಾಖೆಯಿಂದ ಗೌರವ ಸಲ್ಲಿಸಲಾಯಿತು. ಡಿವೈಎಸ್​​ಪಿ ಶಿವಾನಂದ, ಸಿಪಿಐ ಸೇರಿದಂತೆ ಹಲವರು ಈ ವೇಳೆ ಭಾಗಿಯಾಗಿದ್ದರು. ಮಗನ ಕಳೆದುಕೊಂಡ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಆತ್ಮಹತ್ಯೆ ಸಂಬಂಧ ಗದಗ ಗ್ರಾಮೀಣ ಠಾಣೆಯಲ್ಲಿ ಕಿರುಕುಳ ನೀಡಿದ್ದ ಆರೋಪದ ಮೇಲೆ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿ 9 ಜನರ ಮೇಲೆ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗಣೇಶ ವಿಸರ್ಜನೆಗೆ ಮೂರು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ: ಕಮಿಷನರ್ ಭೂಷಣೆ ಬೋರಸೆ

Spread the loveಬೆಳಗಾವಿ: ಗಣೇಶನ ವಿಸರ್ಜನೆಗೆ ಸೂಕ್ತ ಬಂದೋಬಸ್ತ್ ಒದಗಿಸಲು ಬೇರೆ ಜಿಲ್ಲೆಯಿಂದ 3 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ