Breaking News

ಗಂಡ ನೀಡುತ್ತಿದ್ದ ವರದಕ್ಷಿಣೆ ಕಿರುಕುಳವನ್ನು ತಾಳಲಾರದೆ ವೈದ್ಯೆಯಾಗಿರುವ ಹೆಂಡತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

Spread the love

 

ಹೈದರಾಬಾದ್​(ತೆಲಂಗಾಣ): ಗಂಡನ ವರದಕ್ಷಿಣೆ ಕಿರುಕುಳ ತಾಳಲಾರದೆ ವೈದ್ಯೆಯಾಗಿದ್ದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೈದರಾಬಾದ್‌ನ ಮಲಕಪೇಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪತಿ-ಪತ್ನಿ ಇಬ್ಬರೂ ವೈದ್ಯಕೀಯ ವೃತ್ತಿಯಲ್ಲಿದ್ದರು. ಇಬ್ಬರಿಗೂ ಇದು ಎರಡನೇ ಮದುವೆಯಾಗಿತ್ತು. ಆದರೆ, ಗಂಡ ವರದಕ್ಷಿಣೆಗಾಗಿ ವಿಪರೀತ ಕಿರುಕುಳ ನೀಡುತ್ತಿದ್ದನಂತೆ. ಹೀಗಾಗಿ ನೊಂದ ಪತ್ನಿ ಆತ್ಮಹತ್ಯೆಯ ಹಾದಿ ತುಳಿದಿದ್ದಾಳೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪತಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ನಲ್ಗೊಂಡದ ದಾಮರಚಾರ್ಲವಾಸಿ ನಿವಾಸಿ ಸಪ್ನಾ ಎಂಬವರು ಗಂಗನಪಲ್ಲಿಯ ವಿಶ್ವನಾಥ್​ ಜೊತೆ ಮೊದಲ ಮದುವೆ ಮಾಡಿಕೊಂಡಿದ್ದರು. ಇಬ್ಬರ ನಡುವೆ ಹೊಂದಾಣಿಕೆ ಉಂಟಾಗದ ಕಾರಣಕ್ಕಾಗಿ ಅನಿವಾರ್ಯವಾಗಿ ವಿಚ್ಛೇದನ ಪಡೆದುಕೊಂಡಿದ್ದರು. 2015ರ ಏಪ್ರಿಲ್​ ತಿಂಗಳಲ್ಲಿ ಕರ್ನೂಲ್​​ನ ಡಾ.ಶ್ರೀಧರ್​​ ಜೊತೆ ಎರಡನೇ ಮದುವೆಯಾಗಿದ್ದಾರೆ. ಈ ವೇಳೆ ವರದಕ್ಷಿಣೆ ರೂಪದಲ್ಲಿ 10 ಲಕ್ಷ ರೂ. ನಗದು ಹಾಗೂ 14 ತೊಲ ಚಿನ್ನಾಭರಣ ನೀಡಲಾಗಿತ್ತು.


Spread the love

About Laxminews 24x7

Check Also

ಕಲಾ ಪ್ರತಿಭೋತ್ಸವಕ್ಕೆ ಚಾಲನೆ

Spread the love ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ