ಚಿಕ್ಕೊಡಿ: ಹೋಳಿ ಹಬ್ಬದ ನಿಮಿತ್ತ ಬಣ್ಣ ಆಡುವ ನೆಪದಲ್ಲಿ ಕೆಲ ಯುವಕರು ವಸೂಲಿ ದಂಧೆಗೆ ಇಳಿದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಕ್ಕೋಡಿ ರೋಡ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ.
ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ತಡೆದು ವಸೂಲಿಗೆ ಇಳಿದಿರುವ ಖದೀಮರು ಹೆದ್ದಾರಿಯ ಮೇಲೆ ಮರದ ದಿಂಬುಗಳನ್ನ ಅಳವಡಿಸಿ ಹಣ ವಸೂಲಿ ಮಾಡುತ್ತಿದ್ದರು. ಪ್ರತಿ ವಾಹನದಿಂದ 30 ರಿಂದ 50 ರೂಪಾಯಿವರೆಗೆ ವಸೂಲಿ ಮಾಡುತ್ತಿದ್ದಾರೆ. ಹಣ ನೀಡಿದರೇ ಮಾತ್ರ ಮುಂದೆ ಹೋಗಲು ಅವಕಾಶ ಕಲ್ಪಿಸುತ್ತಿದ್ದಾರೆ.
30ಕ್ಕೂ ಹೆಚ್ಚು ಜನರಿಂದ ಹೆದ್ದಾರಿ ಮೇಲೆ ಹಗಲು ದರೋಡೆ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು. ಪೊಲೀಸರಿಗೆ ಮಾಹಿತಿ ನೀಡಿದರು ಸ್ಥಳಕ್ಕೆ ಬಾರದ ಪೊಲೀಸರ ವಿರುದ್ದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.