ಕರ್ನಾಟಕ ಸರಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಟ್ಟ ಬೆನ್ನಲ್ಲೇ, ಸರಕಾರದ ಮತ್ತೊಂದು ಪ್ರಶಸ್ತಿ ಘೋಷಣೆಯಾಗಿದೆ. ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ‘ ಸಹಕಾರ ರತ್ನ’ ಪ್ರಶಸ್ತಿಯನ್ನು ಪುನೀತ್ ಅವರಿಗೆ ಘೋಷಿಸಲಾಗಿದ್ದು, ನಂದಿನಿ ಹಾಲು ಉತ್ಪನ್ನಗಳಿಗೆ ಉಚಿತವಾಗಿ ಜಾಹೀರಾತು ನೀಡಿರುವ ಸೇವೆಯನ್ನು ಪರಿಗಣಿಸಲಾಗಿದೆ.
ಈ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್, ‘ನಟ ಪುನೀತ್ ರಾಜ್ ಕುಮಾರ್ ಅವರು ನಂದಿನಿ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದರು. ಅದನ್ನು ಉಚಿತವಾಗಿ ಮಾಡಿಕೊಟ್ಟಿದ್ದಾರೆ. ಈ ಸೇವೆಯನ್ನು ಪರಿಗಣಿಸಿ ಅವರಿಗೆ ಗೌರವಿಸಲು ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಕೊಡಲು ತೀರ್ಮಾನ ಮಾಡಿದ್ದೇವೆ’ ಎಂದರು.