Breaking News

ಮಾದಕ ವಸ್ತುಗಳನ್ನು ಮಾರಾಟ ಮಾಡ್ತಿದ್ದ ಮೂವರ ಬಂಧನ………..

Spread the love

ಬೆಂಗಳೂರು: ಮಾದಕವಸ್ತುಗಳ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.ಮಹಮ್ಮದ್ ಅಲಗೀರ್, ಮಹಮ್ಮದ್ ರಿಪೂನ್ ಹಾಗೂ ಮೊಹರ್ ಅಲಿ ಬಂಧಿತ ಆರೋಪಿಗಳು. ಇವರು ಪಶ್ಚಮ ಬಂಗಾಳ ಮೂಲದವರು ಎನ್ನಲಾಗಿದೆ. ಬಂಧಿತರಿಂದ 4.40 ಲಕ್ಷ ನಗದು, 11 ಕೆಜಿ ಗಾಂಜಾ ಸೇರಿ ಮಾದಕವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಗಳು ಮಾದಕ ವಸ್ತುಗಳನ್ನು ಪಶ್ಚಿಮ ಬಂಗಾಳದಿಂದ ರೈಲಿನಲ್ಲಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ