ಉಡುಪಿ: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪ್ರಶ್ನಿಸಿರುವುದು ಅವರ ಮಾನಸಿಕತೆಯನ್ನು ತೋರಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಳುಗಿಸಲು ಬೇರೆ ಯಾರ ಅಗತ್ಯವೂ ಇಲ್ಲ.
ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದರು.
ದೇಶದ ಸಂವಿಧಾನ ಹಾಗೂ ನೆಲದ ಕಾನೂನುಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಆದರೆ, ಕೆಲವರು ಕಾನೂನುಗಳಿಂತ ಮೇಲು ಎಂಬ ದುರಂಕಾರ ತೋರುತ್ತಿದ್ದು, ಅವರಿಗೆ ಕಾನೂನಿನಡಿ ಶಿಕ್ಷೆಯಾಗಬೇಕು.
ಮುಸ್ಲಿಂ ಧರ್ಮದಲ್ಲಿ ದೊಡ್ಡವರು, ಶ್ರೀಮಂತರು ಹಿಜಾಬ್ ಇಲ್ಲದೆಯೇ ಹೋಗುತ್ತಾರೆ. ಆದರೆ, ಬಡ ಹೆಣ್ಣುಮಕ್ಕಳನ್ನು ಹಿಜಾಬ್ ಹೆಸರಿನಲ್ಲಿ ಪ್ರಚೋದಿಸಲಾಗುತ್ತಿದೆ. ಕೆಲವು ಕಾಣದ ಕೈಗಳು ಶಿಕ್ಷಣಕ್ಕಿಂತ ಹಿಜಾಬ್ ಮುಖ್ಯ ಎಂಬ ಭಾವನೆಯನ್ನು ವಿದ್ಯಾರ್ಥಿನಿಯರ ತಲೆಯಲ್ಲಿ ಬಿತ್ತುತ್ತಿವೆ ಎಂದು ಶೋಭಾ ಕರಂದ್ಲಾಜೆ ದೂರಿದರು.