ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ 8 ಜನರು ಮೃತಪಟ್ಟಿದ್ದು, ಇವರಲ್ಲಿ ನಾಲ್ವರು ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಪಳವಳ್ಳಿ ಕಟ್ಟೆ ಬಳಿ ತಿರುವಿನಲ್ಲಿ ಎಸ್ ವಿಟಿ ಟ್ರಾವಲ್ ಗೆ ಸೇರಿದ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.25 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ವೈ.ಎ.ಹೊಸಕೋಟೆ ಮೂಲದ ಕಲ್ಯಾಣ್ (18), ಅಮೂಲ್ಯ (17), ಅಜಿತ್ (21) ಹಾಗೂ ಶಾ.ನವಾಜ್ (19) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಗಳು ಪಾವಗಡ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.