Breaking News

ತುಮಕೂರು ಅಪಘಾತದ ಎಲ್ಲಾ ವಿವರ ಪಡೆದು ಕ್ರಮ ಕೈಗೊಳ್ಳುತ್ತೇನೆ : ಸಿಎಂ

Spread the love

ಯಾದಗಿರಿ : ತುಮಕೂರಿನಲ್ಲಿ ಖಾಸಗಿ ಬಸ್ ಅಪಘಾತದ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಷ್ಟೇ ಯಾದಗಿರಿ ಆಗಮಿಸಿರುವೆ. ಅಪಘಾತದ ಕುರಿತಂತೆ ಎಲ್ಲಾ ವಿವರವನ್ನು ತಕ್ಷಣ ಪಡೆದುಕೊಳ್ಳುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಅವರು, ಅಪಘಾತಕ್ಕೆ ಕಾರಣವೇನು ಎಂಬುದನ್ನು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ಅಪಘಾತದಲ್ಲಿ ಐವರು ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರದ ಕುರಿತು ಮಾತನಾಡಿದ ಅವರು, ನಿನ್ನೆಯಷ್ಟೇ ಈ ಕುರಿತು ಗುಜರಾತ್​​ನಲ್ಲಿ ಚರ್ಚೆಯಾಗಿದೆ. ಈ ಕುರಿತು ನಮ್ಮ ಸಚಿವರು ಚರ್ಚೆ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯವರು ವಿವರ ಪಡೆದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ