Breaking News

ಪತಿಗೆ ಪರಸ್ತ್ರೀಯರೊಂದಿಗೆ ಅಕ್ರಮ ಸಂಬಂಧ ಆರೋಪ: ಡೆತ್​​​​ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

Spread the love

ಬೆಂಗಳೂರು: ಪ್ರೀತಿಸಿ ಕೈಹಿಡಿದ ಗಂಡ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಯತ್ರಿ ನಗರದಲ್ಲಿ ನಡೆದಿದೆ.

ಇಂದುಶ್ರೀ (28) ಮೃತ ದುರ್ದೈವಿ. ಎರಡು ವರ್ಷದಿಂದ ಈಕೆ ರಾಕೇಶ್​ ಎಂಬುವವರನ್ನು ಪ್ರೀತಿಸುತ್ತಿದ್ದರು. 9 ತಿಂಗಳ ಹಿಂದೆಯಷ್ಟೇ ಮನೆಯವರನ್ನು ಒಪ್ಪಿಸಿ ರಾಕೇಶ್​ ಜೊತೆ ವಿವಾಹವಾಗಿದ್ದರು. ಆದರೆ, ಮದುವೆಯಾದ ಬಳಿಕ ಗಂಡ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ನೊಂದ ಮಹಿಳೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್​​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ಡೆತ್​​ನೋಟ್​ನಲ್ಲಿ ತನ್ನ ಗಂಡನಿಗೆ ಇತರ ಯುವತಿಯರ ಜೊತೆ ಸಂಬಂಧವಿದೆ ಎಂದು ಉಲ್ಲೇಖಿಸಿದ್ದು, ಇಂದುಶ್ರೀ ತಂದೆಯ ದೂರಿನನ್ವಯ ಸುಬ್ರಹ್ಮಣ್ಯನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ