Breaking News

ಬೇಜವಾಬ್ದಾರಿಯಿಂದಾಗಿ ಪರಿಹಾರ ಸಿಗದೆ ಕಳೆದ ಮೂರು ವರ್ಷಗಳಿಂದ ನೆರೆ ಸಂತ್ರಸ್ತರು ಬಯಲಲ್ಲೇ ವಾಸಿಸುವಂತಾಗಿದೆ..

Spread the love

ಅಥಣಿ : 2019ರಲ್ಲಿ ಕೃಷ್ಣಾ ನದಿಯಲ್ಲಾದ ಪ್ರವಾಹದಿಂದ ಅಥಣಿ ತಾಲೂಕಿನ ದರೂರು ಗ್ರಾಮದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಆದೇಶ ಮಾಡಿತ್ತು. ಆದರೆ, ಜಿಲ್ಲಾಡಳಿತದ ಬೇಜವಾಬ್ದಾರಿಯಿಂದಾಗಿ ಪರಿಹಾರ ಸಿಗದೆ ಕಳೆದ ಮೂರು ವರ್ಷಗಳಿಂದ ನೆರೆ ಸಂತ್ರಸ್ತರು ಬಯಲಲ್ಲೇ ವಾಸಿಸುವಂತಾಗಿದೆ.

ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರು ಗ್ರಾಮಕ್ಕೆ ಬಂದು ನೆರೆ ಸಂತ್ರಸ್ತರಿಗೆ 5 ಲಕ್ಷ ರೂಪಾಯಿ ವೆಚ್ಚದ ಮನೆ ಮಂಜೂರಾತಿ ಪತ್ರವನ್ನು ನೀಡಿದ್ದರು.

ಆದರೆ, ಅದು ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿದೆ ಹೊರತು ನಮಗೆ ಯಾವುದೇ ಪರಿಹಾರ ಬಂದಿಲ್ಲ ಎಂದು ನೆರೆ ಸಂತ್ರಸ್ತ ಸಂಜೀವ ಕಾಂಬಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷ್ಣಾ ನದಿ ಪ್ರವಾಹದಲ್ಲಿ ಬಿದ್ದಮನೆಗಳಿಗೆ 5 ಲಕ್ಷ ರೂಪಾಯಿ, ಅರ್ಧ ಹಾನಿಯಾದ ಮನೆಗಳಿಗೆ 3 ಲಕ್ಷ ರೂಪಾಯಿ, ಹಾಗೆ ಸಣ್ಣಪುಟ್ಟ ಮನೆಯ ರಿಪೇರಿಗೆ ಒಂದು ಲಕ್ಷ ರೂಪಾಯಿಯನ್ನು ಸರ್ಕಾರ ಘೋಷಣೆ ಮಾಡಿತ್ತು.

ಇದುವರೆಗೆ ನೆರೆ ಸಂತ್ರಸ್ತರಿಗೆ ಒಂದೇ ಒಂದು ರೂಪಾಯಿ ಬಂದಿಲ್ಲ. ನಾವು ಬೈಲಲ್ಲಿ ಜೀವನ ಕಳೆಯುವಂತಾಗಿದೆ. ಸರ್ಕಾರ ಮತ್ತು ಆಡಳಿತ ವ್ಯವಸ್ಥೆ ಮೇಲೆ ಭರವಸೆಯನ್ನು ಕಳೆದುಕೊಂಡಿದ್ದೇವೆ ಎಂದು ಅಸಮಾಧಾನ ಹೊರ ಹಾಕಿದರು.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ