Breaking News

ಪ್ರಾಥಮಿಕ ತರಗತಿ ಪುಸ್ತಕದಲ್ಲಿ ದೊಡ್ಮನೆ ಹುಡುಗನ ಯಶೋಗಾಥೆ!

Spread the love

ಬೆಂಗಳೂರು: ಜಾತಿ, ಜನಾಂಗ, ಧರ್ಮ, ಭಾಷೆ ಹೀಗೆ ಎಲ್ಲವನ್ನೂ ಮೀರಿ ಎಲ್ಲರಿಂದಲೂ ಹುಟ್ಟುಹಬ್ಬದ ಶುಭಾಶಯಗಳನ್ನ ಪಡೆದುಕೊಂಡ ಅಪೂರಪದ ವ್ಯಕ್ತಿ ಅಂದರೆ ಅದು ದೊಡ್ಮನೆ ಹುಡುಗ ಪುನೀತ್ ರಾಜಕುಮಾರ್. ಯುವರತ್ನ ಅಪ್ಪುವಿನ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸುವ ಸಾಧ್ಯತೆಯಿದೆ.

 

ಚಿಕ್ಕ ವಯಸ್ಸಿನಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದು ಕನ್ನಡಿಗರ ಕಣ್ಮಣಿಯಾಗಿ ರಾರಾಜಿಸಿ ಇತ್ತೀಚೆಗಷ್ಟೆ ನಿಧನ ಹೊಂದಿರುವ ಪುನೀತ್ ರಾಜ್‍ಕುಮಾರ್ ಅವರ ಜೀವನ ಗಾಥೆಯನ್ನು ಪ್ರಾಥಮಿಕ ಶಾಲಾ ಮಕ್ಕಳಿಗೆ ಪಠ್ಯವನ್ನಾಗಿ ಮಾಡುವಂತೆ ಹಲವಾರು ಸಂಘ-ಸಂಸ್ಥೆಗಳಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರವಸೆ ನೀಡಿದ್ದಾರೆ.

ಚಿಕ್ಕ ವಯಸಿಸನಲ್ಲೇ ಪ್ರಶಸ್ತಿ ಪಡೆಯುವುದರ ಜತೆಗೆ ಸಾಮಾಜಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಜರಾಮರ ಸೇವೆ ಸಲ್ಲಿಸುವ ಮೂಲಕ ಮಕ್ಕಳು ಮತ್ತು ಯುವಕರಿಗೆ ದಾರಿದೀಪವಾಗಿರುವ ಪುನೀತ್ ಅವರ ಜೀವನ ಗಾಥೆ ಮುಂದಿನ ಜನಾಂಗಕ್ಕೆ ಮಾದರಿಯಾಗಬೇಕು ಎಂಬ ಉದ್ದೇಶದಿಂದ ಅವರ ಪಠ್ಯವನ್ನು ಪ್ರಾಥಮಿಕ ಶಾಲೆಯ 4 ಅಥವಾ 5ನೆ ತರಗತಿಯ ಪಠ್ಯದಲ್ಲಿ ಅಳವಡಿಕೆ ಮಾಡಬೇಕು ಎಂದು ಹಲವಾರು ಸಂಘ-ಸಂಸ್ಥೆಗಳು ಬಿಬಿಎಂಪಿಯ ಶಿಕ್ಷಣ ವಿಭಾಗಕ್ಕೆ ಪತ್ರ ಬರೆದು ಒತ್ತಾಯಿಸಿದ್ದವು.

ಚಲನಚಿತ್ರ ನಟರಾಗಿದ್ದರೂ 26 ಅನಾಥಾಶ್ರಮ, 19 ಗೋಶಾಲೆ, 16 ವೃದ್ಧಾಶ್ರಮ ಹಾಗೂ 4800ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳ ಓದಿಗೆ ಸೂರ್ತಿಯಾಗಿದ್ದ ಪುನೀತ್ ರಾಜ್‍ಕುಮಾರ್ ಅವರ ಪಠ್ಯವನ್ನು ಪ್ರಾಥಮಿಕ ಶಾಲಾ ಪುಸ್ತಕದಲ್ಲಿ ಅಳವಡಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಶಿಕ್ಷಣ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.

ಬಿಬಿಎಂಪಿ ಶಿಕ್ಷಣ ಇಲಾಖೆಗೆ ಬಂದಿದ್ದ ಸಂಘ-ಸಂಸ್ಥೆಗಳ ಮನವಿಯನ್ನು ಪಾಲಿಕೆ ಅಕಾರಿಗಳು ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದರು. ಎನ್.ಆರ್.ರಮೇಶ್ ಹಾಗೂ ಬಿಬಿಎಂಪಿಯ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಪ್ರಾಥಮಿಕ ಶಾಲೆಯ 4 ಅಥವಾ 5ನೆ ತರಗತಿಯ ಪಠ್ಯದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಬದುಕನ್ನು ಪಠ್ಯವನ್ನಾಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ನಾಗೇಶ್ ಅವರು ಭರವಸೆ ನೀಡಿದ್ದಾರೆ.

 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ