ತಾರಿಹಾಳ ಗ್ರಾಮದ ಪುಟ್ಟರಾಜ ಕಳ್ಳತನ ಮಾಡುವ ವೇಳೆ ಮೇಲಿಂದ ಬಿದ್ದಿದ್ದಾನೆ. ಈತ ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಕಳ್ಳತನ ಮಾಡಲು ವಿದ್ಯಾನಗರದ ಚನ್ನಮ್ಮ ಅಪಾರ್ಟ್‍ಮೆಂಟ್‍ಗೆ ತೆರಳಿದ್ದ. ಆದರೆ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಕಳ್ಳನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕುಡಿದ ಅಮಲಿನಲ್ಲಿ ಬಿದ್ದು, ಕಳ್ಳ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳ ಈ ಹಿಂದೆ ಎಲ್ಲೆಲ್ಲಿ ಕಳ್ಳತನ ಮಾಡಿದ್ದಾನೆ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Laxmi News 24×7