Breaking News

ಕೋರ್ಟ್ ತೀರ್ಪಿನ ಬಳಿಕವೂ ಪ್ರತಿಭಟನೆ; ಕಠಿಣ ಕ್ರಮದ ಎಚ್ಚರಿಕೆ ನೀಡಿದ ಗೃಹ ಸಚಿವ

Spread the love

ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು ನೀಡಿದ ಬಳಿಕವೂ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ತೀರ್ಪು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

 

ಹಿಜಾಬ್ ಇಸ್ಲಾಂ ನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ, ಶಾಲಾ-ಕಾಲೇಜುಗಳಲ್ಲಿ ಸರ್ಕಾರದ ಸಮವಸ್ತ್ರ ಆದೇಶ ಕಾನೂನು ಬದ್ಧ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿದ್ದು, ತೀರ್ಪಿನ ವಿರುದ್ಧ ಮುಸ್ಲಿಂ ಸಂಘಟನೆಗಳು ರಾಜ್ಯದಲ್ಲಿ ಬಂದ್ ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ತೀರ್ಪು ಪ್ರಕಟವಾದ ಬಳಿಕವೂ ಪ್ರತಿಭಟಿಸುತ್ತಿರುವುದು ಸರಿಯಲ್ಲ ಎಂದರು.

 


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ