Breaking News

40 ಅಡಿ ಆಳದ ಬಾವಿಗೆ ಬಿದ್ದಿದ್ದ ಹೋರಿಯನ್ನು ಅಥಣಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುವ ಮೂಲಕ ಯಶಸ್ವಿಯಾಗಿ ರಕ್ಷಣೆ

Spread the love

ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಿರಣಗಿ ಗ್ರಾಮದ ಹೊರವಲಯದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದಿದ್ದ ಹೋರಿಯನ್ನು ಅಥಣಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುವ ಮೂಲಕ ಯಶಸ್ವಿಯಾಗಿ ರಕ್ಷಣೆ ಮಾಡಿದ್ದಾರೆ.

ಕಿರಣಗಿ ಗ್ರಾಮದ ರೈತರಾದ ಬಸಪ್ಪ ಅವರ ಹೋರಿ ಕಾಲುಜಾರಿ ಬಾವಿಗೆ ಬಿದ್ದಿತ್ತು. ತಕ್ಷಣವೇ ಗ್ರಾಮಸ್ಥರು ಅಗ್ನಿಶಾಮಕ ದಳ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡುತ್ತಿದ್ದಂತೆ ಕಾರ್ಯಪ್ರವೃತ್ತರಾದ ಠಾಣಾಧಿಕಾರಿ ರಾಜು ತಳವಾರ ತಂಡ ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಜೀವಂತವಾಗಿ ಹೋರಿ ಮೇಲೆ ತೆಗೆದಿದ್ದಾರೆ.ಕಷ್ಟಕರ ಕಾರ್ಯಾಚರಣೆಯಿಂದ ಹೋರಿಯನ್ನು ಹರಸಹಾಸ ಪಟ್ಟು ರಕ್ಷಿಸಿ ಬಸಪ್ಪ ಅವರಿಗೆ ಒಪ್ಪಿಸುತ್ತಿದ್ದಂತೆ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ


Spread the love

About Laxminews 24x7

Check Also

ಪತ್ರಕರ್ತರಿಗೆ ತರಬೇತಿ: ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌-ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

Spread the loveಬೆಂಗಳೂರು, (ಸೆಪ್ಟೆಂಬರ್‌ 8): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ