ದಾವಣಗೆರೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಆಗಿರುತ್ತೇನೆ. ದಾವಣಗೆರೆ ದಕ್ಷಿಣದಿಂದ ಮುಂದೆ ಸ್ಪರ್ಧಿಸುವುದಕ್ಕೆ ನನ್ನ ಬಳಿ ಹಣ ಇಲ್ವಾ? ನನ್ನ ಬಳಿ ಶಕ್ತಿ ಇಲ್ವಾ? ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ನಾನು ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೇನೆ. ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ನನ್ನದು ಕೂಡ ಸ್ಪರ್ಧೆ ಇದೆ ಎಂದು ಹೇಳಿದ್ದಾರೆ.