Breaking News

ಸಿಎಂ ವಿರುದ್ಧ ಎಚ್​ಡಿಕೆ ಗರಂ;

Spread the love

ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಗರಂ ಆಗಿದ್ದಾರೆ. ಅದಕ್ಕೆ ಕಾರಣ ಆ ಮೂರು ಆರ್ ಮತ್ತು ನಾಲ್ಕು ಗಂಟೆ..

ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿನ್ನೆ ಸಂಭವಿಸಿದ ಬಸ್ ದುರಂತದಲ್ಲಿ ಗಾಯಗೊಂಡವರನ್ನು ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಸಿಎಂ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದರು.

 

ನಿನ್ನೆ ಚಿಕ್ಕಬಳ್ಳಾಪುರದಲ್ಲಿ ನಡೆದ ಆರ್​ಆರ್​ಆರ್​ ಸಿನಿಮಾ ಪ್ರಚಾರಾರ್ಥ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ಭಾಗಿಯಾದ್ದನ್ನು ಪ್ರಸ್ತಾಪಿಸಿ ಕುಮಾರಸ್ವಾಮಿ, ಬಸ್ ದುರಂತದ ಘಟನೆಗಿಂತ‌ ಮುಖ್ಯಮಂತ್ರಿಯವರಿಗೆ ಸಿನಿಮಾ ಕಾರ್ಯಕ್ರಮ ಮುಖ್ಯವಾಗಿದೆ. ಸಿಎಂ ಆರ್​ಆರ್​ಆರ್​ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಾಲ್ಕು ಗಂಟೆ ಕಾಲಹರಣ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

7ನೇ ದಿನಕ್ಕೆ ಕಾಲಿಟ್ಟ ಕಬ್ಬು ಹೋರಾಟಗಾರರ ಪ್ರತಿಭಟನೆ

Spread the loveಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ