Breaking News

ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುವುದು: ಬಸವರಾಜ ಬೊಮ್ಮಾಯಿ

Spread the love

ದಾವಣಗೆರೆ: ಕರ್ನಾಟಕದಲ್ಲಿ ವೈದ್ಯಕೀಯ ಶುಲ್ಕ ಕಡಿಮೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ.

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಅಲ್ಲಿನ ವೈದ್ಯಕೀಯ ಕೋರ್ಸ್​ಗೂ, ಇಲ್ಲಿಗೂ ಬದಲಾವಣೆ ಇದೆ‌. ಈಗಾಗಲೇ ಇಂತಹ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತೀಯ ವೈದ್ಯಕೀಯ ಮಂಡಳಿ ಚಿಂತನೆ ಮಾಡುತ್ತಿದೆ ಎಂದು ದಾವಣಗೆರೆಯಲ್ಲಿ ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ನಮ್ಮಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಶುಲ್ಕ‌ ಕಡಿಮೆ ಇದೆ. ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡಲಾಗುವುದು. ಶೇ.95 ರಷ್ಟು ಅಂಕ ಪಡೆದವರಿಗೂ ಸೀಟ್ ಸಿಗುತ್ತಿಲ್ಲ. ಈ ಬಗ್ಗೆ ಗಂಭೀರ ಚಿಂತನೆ ಆಗಬೇಕು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳು ಇಂದು ಸಿಎಂ ಭೇಟಿ ಆಗಲಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಸಿಎಂ ಬೊಮ್ಮಾಯಿ ಜತೆ ಚರ್ಚೆ ನಡೆಸಲಿದ್ದಾರೆ.

ರಷ್ಯಾ, ಉಕ್ರೇನ್ ಯುದ್ಧ ಮುಂದುವರಿದಿರುವ ಹಿನ್ನೆಲೆ ಮೆಡಿಕಲ್ ವಿದ್ಯಾರ್ಥಿಗಳಿಂದ ತುಮಕೂರು ಡಿಸಿ ಭೇಟಿ ಮಾಡಲಾಗಿದೆ. ಉಕ್ರೇನ್​​ನಿಂದ ವಾಪಸಾದ ಮೆಡಿಕಲ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಭೇಟಿ ಆಗಿದ್ದಾರೆ. ಯುದ್ಧದಿಂದ ನಮ್ಮ ಶಿಕ್ಷಣದ ಭವಿಷ್ಯ ಅತಂತ್ರವಾಗಿದೆ. ಇಲ್ಲೇ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿಕೊಡಲು ಡಿಸಿಗೆ ಮನವಿ ಮಾಡಲಾಗಿದೆ. ಡಿಸಿ ವೈ.ಎಸ್. ಪಾಟೀಲ್​ಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ 26 ಮೆಡಿಕಲ್ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಮನವಿ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಹೇಳಿದ್ದಾರೆ.

ಉಕ್ರೇನ್ ನಿಂದ ವಾಪಸ್ ಆಗಿ ನಮ್ಮ ವಿದ್ಯಾಭ್ಯಾಸ ತೊಂದರೆಯಾಗಿದೆ. ಹೀಗಾಗಿ ನಮಗೆ ನಮ್ಮ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಸೀಟ್ ಕೊಡಿಸಬೇಕೆಂದು ಡಿಸಿಗೆ ಮನವಿ ಮಾಡಿದ್ದೇವೆ. ಆಯಾ ಸೆಮಿಸ್ಟರ್ ಪರೀಕ್ಷೆಗಳಿಗೆ ಅನುಗುಣವಾಗಿ ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ. ಸರ್ಕಾರ ನಮಗೆ ವ್ಯವಸ್ಥೆ ಕಲ್ಪಿಸಬೇಕೆಂದು ವಿದ್ಯಾರ್ಥಿಗಳಿಂದ ಮನವಿ ಮಾಡಲಾಗಿದೆ ಎಂದು ಉಕ್ರೇನ್​ನಿಂದ ವಾಪಸ್ ಆದ ಮೆಡಿಕಲ್ ವಿದ್ಯಾರ್ಥಿನಿ ರೂಪಶ್ರೀ ಹೇಳಿಕೆ ನೀಡಿದ್ದಾರೆ.

ಉಕ್ರೇನ್​ನಿಂದ ವಾಪಸ್ ಆದ ವಿದ್ಯಾರ್ಥಿಗಳು ನನ್ನ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡಿದ್ದಾರೆ. ಉಕ್ರೇನ್​ನಲ್ಲಿ ವಿದ್ಯಾಭ್ಯಾಸ ಸಂಪೂರ್ಣ ನಿಂತಿದ್ದು, ನಮ್ಮ ರಾಜ್ಯದಲ್ಲಿ ಹತ್ತಿರದ ಮೆಡಿಕಲ್ ಕಾಲೇಜಿನಲ್ಲಿ ಸೀಟ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ. ನಾನು ಈ ಬಗ್ಗೆ ಸರ್ಕಾರಕ್ಕೆ ತಿಳಿಸಿ, ಬಳಿಕ ಸರ್ಕಾರದ ನಿರ್ಧಾರವನ್ನು ತಿಳಿಸಲಾಗುತ್ತದೆ ಎಂದು ತುಮಕೂರು ಡಿಸಿ ವೈಎಸ್ ಪಾಟೀಲ್ ಹೇಳಿದ್ದಾರೆ.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ