Breaking News

ಪ್ರತಿಯೊಬ್ಬ ಭಾರತೀಯರೂ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಿ: ಅಮೀರ್ ಖಾನ್

Spread the love

ಮಾರ್ಚ್ 11 ರಂದು ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗ್ತಿದೆ. ಅಭಿಮಾನಿಗಳು ಸಿನಿಮಾ ನೋಡಲು ಥಿಯೇಟರ್‌ ಗಳಿಗೆ ಲಗ್ಗೆ ಇಡುತ್ತಿದ್ದಾರೆ.

ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಹ ಈ ಚಿತ್ರವನ್ನು ಶ್ಲಾಘಿಸಿದ್ದು, ಸಿನಿಮಾ ನೋಡಲು ಪ್ರೇಕ್ಷಕರಿಗೆ ಸಲಹೆ ನೀಡಿದ್ದಾರೆ.

ಈಗ ನಟ ಅಮೀರ್ ಖಾನ್ ಕೂಡ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸುವಂತೆ ತಿಳಿಸಿದ್ದಾರೆ.

ಮಾಧ್ಯಮ ಸಂವಾದದ ವೇಳೆ ಅಮೀರ್, ಪ್ರತಿಯೊಬ್ಬ ಭಾರತೀಯನೂ ಕಾಶ್ಮೀರ ಫೈಲ್ಸ್ ನೋಡಲೇಬೇಕು ಎಂದು ಹೇಳಿದ್ದಾರೆ. ಅಮೀರ್ ಖಾನ್ ಮತ್ತು ಆಲಿಯಾ ಭಟ್ ನಿನ್ನೆ ಮಾರ್ಚ್ 20 ರಂದು ದೆಹಲಿಯಲ್ಲಿ ‘RRR’ ಗಾಗಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಮಾಧ್ಯಮ ಸಂವಾದದ ಸಮಯದಲ್ಲಿ, ಅಮೀರ್‌ ಗೆ ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ಅವರ ಅಭಿಪ್ರಾಯಗಳ ಬಗ್ಗೆ ಕೇಳಲಾಯಿತು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅಮೀರ್, ಹೌದು, ನಾನು ಖಂಡಿತವಾಗಿ ನೋಡುತ್ತೇನೆ. ಕಥೆಯು ನಮ್ಮ ಇತಿಹಾಸದ ಒಂದು ಭಾಗವಾಗಿದೆ. ಕಾಶ್ಮೀರಿ ಪಂಡಿತರಿಗೆ ಸಂಬಂಧಿಸಿದ ಘಟನೆ ದುಃಖಕರವಾಗಿದೆ. ಅಂತಹ ಚಲನಚಿತ್ರವನ್ನು ಎಲ್ಲ ಭಾರತೀಯರೂ ನೋಡಬೇಕು ಎಂದಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ