15 ದಿನ,700 ಕಿ.ಮೀ.. ಮರಗಾಲು ಕಟ್ಟಿಕೊಂಡು ಶ್ರೀಶೈಲಕ್ಕೆ ಪಾದಯಾತ್ರೆ ಹೊರಟ ಭಕ್ತ..

Spread the love

ಅಥಣಿ : ದೇವಸ್ಥಾನ, ಪುಣ್ಯ ಕ್ಷೇತ್ರಗಳಿಗೆ ಕೆಲವರು ಪಾದಯಾತ್ರೆ ಮುಖಾಂತರ ಹೋಗುವುದನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬ ಭಕ್ತ ಮರಗಾಲು ಕಟ್ಟಿಕೊಂಡು ದೂರದ ಆಂಧ್ರಪ್ರದೇಶದ ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದೇವರಹಟ್ಟಿ ಗ್ರಾಮದವರು ಪಾದಯಾತ್ರೆ ಮುಖಾಂತರ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೊರಟಿದ್ದಾರೆ. ಇದರಲ್ಲಿ ಓರ್ವ ಯುವಕ ದಶರಥ್ ನಾಯ್ಕ್ ಮರಗಾಲು ಕಟ್ಟಿಕೊಂಡು ಪಾದಯಾತ್ರೆ ಮುಖಾಂತರ ತಮ್ಮ ಭಕ್ತಿ ಪರಾಕಾಷ್ಠೆ ಮೆರೆಯುತ್ತಿದ್ದಾರೆ.

ಅಥಣಿ ತಾಲೂಕಿನ ದೇವರಹಟ್ಟಿ ಗ್ರಾಮದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನ ಸರಿ ಸುಮಾರು 700 ಕಿಲೋಮೀಟರ್ ದೂರದವಿದೆ. 15 ದಿನಗಳವರೆಗೆ ಪಾದಯಾತ್ರೆ ಮುಖಾಂತರ ತೆರಳುತ್ತಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ