ಬೆಂಗಳೂರು: ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ನಟ ಕಿಚ್ಚ ಸುದೀಪ್ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಕೊರೊನಾ ಹಿನ್ನೆಲೆ ಅಭಿಮಾನಿಗಳ ಹಿತಕ್ಕಾಗಿ ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ಹುಟ್ಟುಹಬ್ಬಕ್ಕೂ ಮುನ್ನವೇ ಅಭಿಮಾನಿಗಳಿಗೆ ಮನೆಯ ಬಳಿ ಬಾರದಂತೆ ಮನವಿ ಮಾಡಿಕೊಂಡಿದ್ದರು. ಆದರೂ ಅಭಿಮಾನಿಗಳು ಅವರ ಮನೆಯ ಬಳಿ ಗುಂಪು ಸೇರಿದ್ದರು.ಮಂಗಳವಾರ ಮಧ್ಯರಾತ್ರಿ ಅಭಿಮಾನಿಗಳು ಕಿಚ್ಚನ ಪುಟ್ಟೇನಹಳ್ಳಿ ನಿವಾಸ ಬಳಿ ಗುಂಪು ಸೇರಿದ್ದರು.
ಹೀಗಾಗಿ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಮನೆಗೆ ವಾಪಸ್ ಕಳುಹಿಸಿದ್ದಾರೆ. ನಟ, ನಟಿಯರು, ನಿರ್ದೇಶರು ಮತ್ತು ಅಭಿಮಾನಿಗಳು ಸೋಶಿಯಲ್ ಮೀಡಿಯಾದ ಮೂಲಕ ಸುದೀಪ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.
ಸುದೀಪ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರವೇ ತುಮಕೂರಿನ ಸಿದ್ದಗಂಗಾ ಮಠಕ್ಕೆ ಹೋಗಿದ್ದರು. ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಹೋಗಿ ದರ್ಶನ ಪಡೆದುಕೊಂಡಿದ್ದರು. ಗದ್ದುಗೆಗೆ ಪೂಜೆ, ಕುಂಕುಮಾರ್ಚನೆ ಮಾಡಿದ್ದರು. ಈ ಸಂದರ್ಭದಲ್ಲಿ ಅರ್ಚಕರು ಶಿವಕುಮಾರ ಶ್ರೀಗಳ ಭಾವಚಿತ್ರವನ್ನು ಸುದೀಪ್ ಅವರಿಗೆ ಕಾಣಿಕೆಯಾಗಿ ಕೊಟ್ಟಿದ್ದರು.
Laxmi News 24×7