Breaking News

ಬಣ್ಣ ಆಡುವ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಜನರು ಆತಂಕದಲ್ಲಿ

Spread the love

ರಂಗ ಪಂಚಮಿ ಹಬ್ಬದ ಪ್ರಯುಕ್ತ ಬಣ್ಣ ಆಡುವ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ  ಬಣ್ಣ ಎರಚಾಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿದ್ದು, ಗ್ರಾಮ ಪಂಚಾಯತ ಅಧ್ಯಕ್ಷನನ್ನು ತಳ್ಳಾಡುವುದರ ಜೊತೆಗೆ ಪೊಲೀಸರ ಮೇಲೆಯೇ ಯುವಕರ ಗುಂಪೊಂದು ಹಲ್ಲೆ ಮಾಡಿದೆ.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕೋಡಿ ಪಿಎಸ್‍ಐ ಹಾಗೂ ಸಿಬ್ಬಂದಿ ದೌಡಾಯಿಸಿದ್ದಾರೆ.ಹೆಚ್ಚಿನ ಪೊಲೀಸ್ ನಿಯೋಜನೆ ಬಳಿಕ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಇದರಿಂದಾಗಿ ಕರೋಶಿ ಗ್ರಾಮ ಸಂಪೂರ್ಣ ಬಂದ್ ಆಗಿದೆ.
ಸದ್ಯ ಕರೋಶಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜನರು ಆತಂಕದಲ್ಲಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ