Breaking News

ಬೆಳಗಾವಿ ಬಿಜೆಪಿಯಲ್ಲಿ ಲಿಂಗಾಯತರಿಗೆ ಬೆಲೆ ಇಲ್ಲ: ರಾಜ್‍ಕುಮಾರ್ ಟೋಪಣ್ಣವರ

Spread the love

ಬೆಳಗಾವಿಯಲ್ಲಿ ಬಿಜೆಪಿಯಲ್ಲಿ ಲಿಂಗಾಯತ ಕಾರ್ಯಕರ್ತರಿಗೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇನೆ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜಕುಮಾರ ಟೋಪಣ್ಣವರ ಬಿಜೆಪಿ ಶಿಸ್ತಿನ ಸಿಪಾಯಿಯಾಗಿದ್ದ ಪಾಲಿಕೆ ಮಾಜಿ ಸದಸ್ಯ ದೀಪಕ ಜಮಖಂಡಿ ಹಾಗೂ ಬುಡಾ ಮಾಜಿ ಅಧ್ಯಕ್ಷ ಘೂಳಪ್ಪ ಹೊಸಮನಿ ಅವರು ಲಿಂಗಾಯತ ಸಮುದಾಯದ ವ್ಯಕ್ತಿಗಳೆಂದು ಅವರನ್ನು ಉಚ್ಚಾಟನೆ ಮಾಡಿದ್ದು ನನ್ನ ಮನಸ್ಸನ್ನು ಘಾಸಿಗೊಳಿಸಿದೆ. ಇನ್ನು ಬಿಜೆಪಿ ನಗರ ಘಟಕದ ಜಿಲ್ಲಾಧ್ಯಕ್ಷ ಶಶಿಕಾಂತ ಪಾಟೀಲ ತಮ್ಮದೆ ಅಶ್ಲೀಲ ಫೆÇೀಟೋ ಹರಿಬಿಟ್ಟು ಪಕ್ಷಕ್ಕೆ ಮುಜುಗರ ತಂದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಯಾಕೆ ಎಂದು ಪ್ರಶ್ನಿಸಿದರು.

ಇನ್ನು ಭ್ರಭ್ರಷ್ಟಾಚಾರದ ಪ್ರಕರಣ ಎದುರಿಸುತ್ತಿರುವ ಸ್ಥಳೀಯ ಬಿಜೆಪಿ ಶಾಸಕರು ಸದನದಲ್ಲಿ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತುತ್ತಾರೆ. ಆರೋಪ ಎದುರಿಸುತ್ತಿರುವ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಪರೋಕ್ಷವಾಗಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ವಿರುದ್ಧ ರಾಜಕುಮಾರ್ ಟೋಪಣ್ಣವರ ಕಿಡಿಕಾರಿದರು. ಅದೇ ರೀತಿ ಬೆಳಗಾವಿ ಸ್ಮಾರ್ಟ್ ಸಿಟಿಯ ಕಳಪೆ ಕಾಮಗಾರಿ ಹಾಗೂ  ಭ್ರಷ್ಟಾಚಾರ ನಡೆಸಿರುವ ಕುರಿತು ಸಂಬಂಧಿಸಿದ ಇಲಾಖೆಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿಯ ಅಧಿಕಾರಿಗಳ ಮೇಲೆ ತನಿಖೆ ಮಾಡಲು ಸೂಚಿಸಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ