ಬಾಲ್ಯ ವಿವಾಹದಲ್ಲಿ ಕರ್ನಾಟಕಕ್ಕೆ ನಂಬರ್-1 ಸ್ಥಾನ:

Spread the love

ಬೆಂಗಳೂರು: ಬಾಲ್ಯವಿವಾಹಗಳಲ್ಲಿ ಕರ್ನಾಟಕ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. 2020-21ರಲ್ಲಿ 296 ಬಾಲ್ಯವಿವಾಹ ಪ್ರಕರಣಗಳು ರಾಜ್ಯದಲ್ಲಿ ನಡೆದಿದೆ. ಈ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಬಾಲ್ಯ ವಿವಾಹ ತಡೆಯುವ ಪ್ರಕರಣ ತಡೆಯಲು ಎಲ್ಲ ರೀತಿಯ ಪ್ರಯತ್ನ ನಡೆಸುವುದಾಗಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ

ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕೆ. ಗೋವಿಂದರಾಜು ಪ್ರಶ್ನೆಗೆ ಉತ್ತರಿಸಿದ ಸಚಿವರು, ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ ಮಿನಿಸ್ತ್ರಿ ಅಫ್ ಹೋಮ್ ಅಫೇರ್ಸ್ ಅವರ ಕ್ರೈಮ್ ಇನ್ ಇಂಡಿಯಾ-2020 ವರದಿ ಅನುಸಾರ ಕರ್ನಾಟಕದಲ್ಲಿ 184 ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿವೆ. ಉಳಿದ ರಾಜ್ಯಗಳಿಗೆ ಹೋಲಿಸಿದಾಗ ಕರ್ನಾಟಕ ರಾಜ್ಯದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚು ವರದಿಯಾಗಿವೆ ಎಂದು ಮಾಹಿತಿ ನೀಡಿದರು.

2018-19ರಲ್ಲಿ 119, 2019-20ರಲ್ಲಿ 156,‌ 2020-21ರಲ್ಲಿ 296 ಬಾಲ್ಯವಿವಾಹ ಪ್ರಕರಣಗಳು ರಾಜ್ಯದಲ್ಲಿ ನಡೆದಿದೆ. ರಾಜ್ಯದ ಉಡುಪಿ ಜಿಲ್ಲೆಯನ್ನು ಹೊರತುಪಡಿಸಿ ಉಳಿದ 29 ಜಿಲ್ಲೆಯಲ್ಲಿಯೂ ಬಾಲ್ಯವಿವಾಹ ನಡೆದ ಪ್ರಕರಣಗಳು ವರದಿಯಾಗಿವೆ. ಕಳೆದ ಮೂರು ವರ್ಷಗಳಲ್ಲಿ 571 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದೆ. ವರ್ಷದಿಂದ ವರ್ಷಕ್ಕೆ ಬಾಲ್ಯವಿವಾಹ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಕೊರೊನಾ ವೇಳೆ ಇದು ದ್ವಿಗುಣಗೊಂಡಿದೆ ಎಂಬುದು ಅಂಕಿ-ಅಂಶಗಳಿಂದ ಸ್ಪಷ್ಟವಾಗಿದೆ. ಆದರೂ ಬಾಲ್ಯ ವಿವಾಹ ತಡೆಯುವ ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ, ಸಮಾಜದಲ್ಲಿ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸುತ್ತೇವೆ ಎಂದರು.


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ