2 ವರ್ಷದಲ್ಲಿ ಆನೆ ಕಾರಿಡಾರ್ ನಿರ್ಮಾಣ ಪೂರ್ಣ: ಸಚಿವ ಕತ್ತಿ

Spread the love

ಬೆಂಗಳೂರು: ಆನೆ ಹಾವಳಿ ನಿಯಂತ್ರಣಕ್ಕಾಗಿ ಕಾರಿಡಾರ್ ನಿರ್ಮಿಸಲು ಬೇಕಾಗುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಜೊತೆಗೂಡಿ ದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವರಲ್ಲಿ ಮನವಿ ಮಾಡಲಿದ್ದೇನೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ತಿಳಿಸಿದರು. ವಿಧಾನಸಭೆಯಲ್ಲಿ ನಿಯಮ 69ರಡಿ ಕಾಡಾನೆಗಳು ಹಾಗೂ ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗಿರುವ ಸಮಸ್ಯೆ, ಪರಿಹಾರೋಪಾಯ ಬಗ್ಗೆ ಚರ್ಚೆಗೆ ಅವರು ಉತ್ತರ ನೀಡಿದರು.

ಈಗಾಗಲೇ ಕಾರಿಡಾರ್ ಕಟ್ಟುವ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ ಒಟ್ಟು 617 ಕಿ.ಮೀ. ಕಿ.ಮೀ.ಕಾರಿಡಾರ್ ಕಟ್ಟಬೇಕು. ಈವರೆಗೆ 181 ಕಿ.ಮೀ. ಕಾರಿಡಾರ್ ಕಟ್ಟಲಾಗಿದೆ. ಇನ್ನೂ ಸುಮಾರು 390 ಕಿ.ಮೀ. ಕಾರಿಡಾರ್ ಕಟ್ಟಬೇಕಿದೆ ಎಂದರು.

ರೈಲ್ವೇ ಹಳಿ ಹಾಕಿ ಕಾರಿಡಾರ್ ಹಾಕಿದರೆ ಶಾಶ್ವತ ಪರಿಹಾರ ಸಿಗುತ್ತದೆ‌. ಇದಕ್ಕಾಗಿ ಸುಮಾರು 595 ಕೋಟಿ ರೂ. ಬೇಕಾಗುತ್ತದೆ. ಸದನ ಮುಗಿದ ತಕ್ಷಣ ದೆಹಲಿಗೆ ಹೋಗಿ, ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ, ಅವರ ಜೊತೆಗೂಡಿ ಕೇಂದ್ರ ಪರಿಸರ ಸಚಿವರನ್ನು ಭೇಟಿಯಾಗಿ ಅನುದಾನ ನೀಡುವಂತೆ ಮನವಿ ಮಾಡುತ್ತೇವೆ. ಎರಡು ವರ್ಷದಲ್ಲಿ ಬ್ಯಾರಿಕೇಡ್ ಕಟ್ಟುವ ಕೆಲಸ ಮಾಡುತ್ತೇವೆ. ಜೊತೆಗೆ ಪರಿಹಾರ ಸಂಬಂಧ ಸಮಿತಿ ಇದೆ. ಪರಿಹಾರ ಹಣ ಪರಿಷ್ಕರಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

Bigg Boss ಸೀಸನ್​-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು

Spread the love ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss)​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ