Breaking News

ಟ್ವಿಟರ್‌ನಲ್ಲಿ ಬೆಳಗಾವಿ ಫೈಲ್ಸ್ ಎಂದು ವ್ಯಂಗ್ಯದ ಚಿತ್ರವನ್ನು ಸಂಜಯ್ ರಾವತ್ ಪೋಸ್ಟ್ ಮಾಡಿದ್ದು, ಕನ್ನಡಿಗರು ಆಕ್ರೋಶ

Spread the love

ಬೆಳಗಾವಿ: ವಿವಾದಾತ್ಮಕ ಟ್ವೀಟ್ ಮೂಲಕ ಶಿವಸೇನೆ ನಾಯಕ ಸಂಜಯ್ ರಾವತ್​ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಪರ ವಿರೋಧ ಚರ್ಚೆ ಮಧ್ಯೆಯೇ ಟ್ವಿಟರ್‌ನಲ್ಲಿ ಸಂಜಯ್ ರಾವತ್ ಬೆಳಗಾವಿ ಫೈಲ್ಸ್ ಎಂದು ಪೋಸ್ಟ್ ಮಾಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

Image

 

ಬೆಳಗಾವಿ ಫೈಲ್ಸ್ ಎಂದು ವ್ಯಂಗ್ಯದ ಚಿತ್ರವನ್ನು ರಾವತ್ ಪೋಸ್ಟ್ ಮಾಡಿದ್ದಾರೆ. ಬೆಳಗಾವಿ ಫೈಲ್ಸ್ ಏನು ಕಡಿಮೆ ಇದೆಯಾ? ಪ್ರಜಾಪ್ರಭುತ್ವದ ಹತ್ಯೆ ಎಂಬ ಬರಹ ಇರುವ ಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಮೂಲಕ ಬೆಳಗಾವಿಯಲ್ಲಿರುವ ಮರಾಠಿಗರ ಮೇಲೆ ದೌರ್ಜನ್ಯ ಆಗುತ್ತಿದೆ ಎಂದು ಬಿಂಬಿಸುವ ಯತ್ನವನ್ನು ರಾವತ್ ಮಾಡಿದ್ದಾರೆ. ಪರಿಣಾಮ ರಾವತ್ ವಿರುದ್ಧ ಬೆಳಗಾವಿಯಲ್ಲಿ ಆಕ್ರೋಶ ಭುಗಿಲೆದ್ದಿದೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ