Breaking News

ಚರಂಡಿಗಿಳಿದು ಕೊಳಚೆ ಶುಚಿಗೊಳಿಸಿದ ಆಪ್ ಕೌನ್ಸಿಲರ್‌ಗೆ ಹಾಲಿನ ಸ್ನಾನ..!

Spread the love

ದೆಹಲಿ: ಇಲ್ಲಿನ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಹಸೀಬ್-ಉಲ್-ಹಸನ್ ಅವರು ಶಾಸ್ತ್ರಿ ಉದ್ಯಾನದಲ್ಲಿ ಕೊಳಚೆ ತುಂಬಿದ್ದ ಚರಂಡಿಗಿಳಿದು ನೀರನ್ನು ಸ್ವಚ್ಛಗೊಳಿಸಿದ ಪ್ರಸಂಗ ನಡೆದಿದೆ. ಇದಕ್ಕೆ ಪ್ರತಿಯಾಗಿ ಗೌರವ ಸಲ್ಲಿಸಿದ ಸಾರ್ವಜನಿಕರು, ಕೌನ್ಸಿಲರ್ ಅವರನ್ನು ಹಾಲಿನಲ್ಲೇ ಸ್ನಾನ ಮಾಡಿಸಿದ್ದಾರೆ.

ಪೂರ್ವ ದೆಹಲಿಯ ಕೌನ್ಸಿಲರ್ ಆಗಿರುವ ಹಸನ್ ಬಿಳಿ ಕುರ್ತಾ ಧರಿಸಿ ಎದೆ ಮಟ್ಟದವರೆಗೆ ತುಂಬಿಕೊಂಡಿದ್ದ ಚರಂಡಿಗೆ ಇಳಿದು ಅಲ್ಲಿನ ಕೊಳಚೆಯನ್ನು ಶುಚಿಗೊಳಿಸಿದರು. ಚರಂಡಿಯಲ್ಲಿ ತೇಲುತ್ತಿದ್ದ ತ್ಯಾಜ್ಯ ವಸ್ತುಗಳನ್ನು ಹಸನ್ ತೆಗೆದು ಹಾಕಿದ್ದಾರೆ. ಇದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ನಲ್ಲಿ ವೀಡಿಯೋ ಸೆರೆ ಹಿಡಿದಿದ್ದು, ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ