Breaking News

ST’ ಮೀಸಲಾತಿ ಹೆಚ್ಚಳದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

Spread the love

ಬೆಂಗಳೂರು : ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಲವು ತೋರಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಚಿವರು, ಕಾನೂನು ತಜ್ಞರುಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆಯೂ ಚರ್ಚೆಯಾಗಿದೆ. 7.5 % ಗೆ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಸಮುದಾಯವರ ಬೇಡಿಕೆಯಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ. ಹಿಂದಿನ ಸರ್ಕಾರ ಈ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚಿಸಿತ್ತು. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಮಿತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಎಸ್.ಸಿ ಮತ್ತು ಎಸ್. ಟಿ ಗೆ ಮೀಸಲಾತಿ ಹೆಚ್ಚಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಅದರಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದರು.

ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ, ಮಹಾರಾಷ್ಟ್ರದ ಜಯಶ್ರೀ ಪಾಟೀಲ್ ಪ್ರಕರಣ ಹಾಗೂ ಇಂದಿರಾ ಸಹಾನಿ ಪ್ರಕರಣಗಳ ತೀರ್ಪುಗಳ ಹಿನ್ನೆಲೆಯಲ್ಲಿ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ಅವರಿಂದಲೂ ಮಧ್ಯಂತರ ವರದಿ ಪಡೆದು ಈ ಜನಾಂಗಕ್ಕೆ ಮೀಸಲಾತಿ ಹೆಚ್ಚು ಮಾಡುವ ಮೂಲಕ ನ್ಯಾಯವನ್ನು ಕೊಡಬೇಕೆಂಬ ತೀರ್ಮಾನವಾಗಿದೆ ಎಂದರು.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ತ್ಯಾಜ್ಯ ಬಿಸಾಡಿದರೆ ಬೀಳುತ್ತೆ ದಂಡ

Spread the loveಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆಯ ಕುಮಾರಧಾರ ನದಿಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಪೊಲೀಸ್ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ