ಬೆಂಗಳೂರು: ಮಂಗನಹಳ್ಳಿಯಲ್ಲಿ ನಡೆದ ವಿದ್ಯುತ್ ಪರಿವರ್ತಕ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಅಪ್ಪ, ಮಗಳು ಮೃತಪಟ್ಟಿದ್ದಾರೆ. ಕೆಲವೇ ದಿನಗಳಲ್ಲಿ ನಡೆಯಬೇಕಿದ್ದ ಮದುವೆಗಾಗಿ ಕಲ್ಯಾಣ ಮಂಟಪ ಬುಕ್ ಮಾಡಿಕೊಂಡು ಸ್ಕೂಟಿಯಲ್ಲಿ ವಾಪಸ್ ಮನೆಗೆ ಬರುತ್ತಿದ್ದಾಗ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಪರಿವರ್ತಕ ಸ್ಫೋಟಗೊಂಡು ಯುವತಿ ಚೈತನ್ಯ(25), ಅವರ ತಂದೆ ಶಿವರಾಜ್(55) ಗಂಭೀರವಾಗಿ ಗಾಯಗೊಂಡಿದ್ದರು.
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿ ಬಳಿ ಬುಧವಾರ ಘಟನೆ ನಡೆದಿತ್ತು. ಟ್ರಾನ್ಸ್ಫಾರ್ಮರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಸುಟ್ಟ ಗಾಯಗಳಾಗಿದ್ದ ಶಿವರಾಜ್ ಹಾಗೂ ಚೈತನ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಇಬ್ಬರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Laxmi News 24×7