ಬೆಂಗಳೂರು: ಸ್ಯಾಂಡಲ್ ವುಡ್ ನ ತುಪ್ಪದ ಹುಡುಗಿ ರಾಗಿಣಿ ಅವರು ಕಮಲ ಪಾಳಯದಿಂದ ಕೈ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಕಳೆದ ವರ್ಷ ಏಪ್ರಿಲ್ 14ರಂದು ಬಿಜೆಪಿ ಸೇರಿದ್ದ ರಾಗಿಣಿ ದ್ವಿವೇದಿ ಅವರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ. ಈ ಹಿಂದೆ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೆಆರ್ ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರ ಪರವಾಗಿ ಬಿ.ವೈ. ವಿಜಯೇಂದ್ರ ಅವರ ಜೊತೆ ರಾಗಿಣಿ ಭರ್ಜರಿ ಪ್ರಚಾರ ಮಾಡಿದ್ದರು.
ಬಿಜೆಪಿ ಸರ್ಕಾರ ರಚನೆಯಾದ ಬಳಿಕ ಯಾವುದಾದ್ರು ಹುದ್ದೆ ದೊರೆಯಬಹುದು ಎಂಬ ನಿರೀಕ್ಷೆ ಹೊಂದಿದ್ದರು ಎನ್ನಲಾಗಿದೆ. ಯಾವುದೇ ಹುದ್ದೆಯನ್ನು ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಸುದ್ದಿ ಹೇಳಿ ಬಂದಿದೆ.
Laxmi News 24×7