Breaking News

ಬಸ್​ನಲ್ಲಿ ಹುಡುಗರ ಜತೆ ಎಣ್ಣೆ ಹೊಡೆದ ವಿದ್ಯಾರ್ಥಿನಿಯರ ವೈರಲ್​ ವಿಡಿಯೋ ಅಸಲಿಯತ್ತು ಬಯಲು!

Spread the love

ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್​ನಲ್ಲಿ ಶಾಲಾ ವಿದ್ಯಾರ್ಥಿಗಳು ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿರುವ ಈ ವಿಡಿಯೋವನ್ನು ವಿದ್ಯಾರ್ಥಿಯೊಬ್ಬ ರೆಕಾರ್ಡ್​ ಮಾಡಿದ್ದಾನೆಂದು ತಿಳಿದುಬಂದಿದೆ.

ಹುಡುಗಿಯರು ಮತ್ತು ಹುಡುಗರ ಗುಂಪೊಂದು ಶಾಲಾ ಸಮವಸ್ತ್ರದಲ್ಲೇ ಬಸ್​ನಲ್ಲಿ ಬಿಯರ್​ ಸೇವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಎಲ್ಲ ವಿದ್ಯಾರ್ಥಿಗಳು ಚೆಂಗಲ್ಪಟ್ಟು ಸರ್ಕಾರಿ ಶಾಲೆಯವರು ಎಂದು ನಂಬಲಾಗಿದೆ.

ಆರಂಭದಲ್ಲಿ ಇದನ್ನು ಹಳೇ ವಿಡಿಯೋ ಎಂದು ನಂಬಲಾಗಿತ್ತು. ಆದರೆ, ಈ ಘಟನೆ ಕಳೆದ ಮಂಗಳವಾರ ನಡೆದಿರುವುದಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳು ತಿರುಕಝುಕುಂದ್ರಂನಿಂದ ತಾಚೂರ್‌ಗೆ ತೆರಳುತ್ತಿದ್ದ ಬಸ್‌ನಲ್ಲಿದ್ದರು ಎಂದು ತಿಳಿದುಬಂದಿದೆ.

ಈ ಘಟನೆಯನ್ನು ಗಮನಿಸಿರುವ ಜಿಲ್ಲಾ ಶಿಕ್ಷಣಾಧಿಕಾರಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಪೊಲೀಸ್​ ತನಿಖೆಯನ್ನು ಕೈಗೊಳ್ಳಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ