Breaking News

ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

Spread the love

ನವದೆಹಲಿ : ದೇಶದಲ್ಲಿ ಕಳೆದ 5 ದಿನಗಳಲ್ಲಿ 4 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿದೆ. ಈ ಮೂಲಕ 4 ದಿನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 3.6 . ರೂ ಹೆಚ್ಚಳವಾಗಿದೆ.

ಇಂದು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 98.61 ಮತ್ತು 89.87 ರೂ.ಏರಿಕೆಯಾದರೆ, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 103.86 ರೂ. ಮತ್ತು ಡೀಸೆಲ್ ಬೆಲೆ 88.18 ರೂ.ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 113.27 ರೂ ಮತ್ತು 85 ಪೈಸೆ ಹೆಚ್ಚಳದ ನಂತರ ಡೀಸೆಲ್ ಬೆಲೆ ಲೀಟರ್‌ಗೆ 97.10 ರೂ. ಹೆಚ್ಚಾಗಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 104.47 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 94.51 ರೂ.

137 ದಿನಗಳ ವಿರಾಮದ ನಂತರ ಇದು ನಾಲ್ಕನೇ ಹೆಚ್ಚಳವಾಗಿದೆ. ಮಂಗಳವಾರ, ಬುಧವಾರ, ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ತಲಾ 80 ಪೈಸೆ ಏರಿಕೆಯಾಗಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ