ಶಿವಮೊಗ್ಗ: ನಗರದ ಶ್ರೀ ಕೋಟೆ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅಂಗಡಿ ಮುಂಗಟ್ಟು ಹಾಕಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆಯುತ್ತಿರುವ ಇತಿಹಾಸ ಪ್ರಸಿದ್ಧ ಮಹಾ ಗಣಪತಿ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಮಳಿಗೆ ನೀಡದಂತೆ ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.
ಏಪ್ರಿಲ್ 5 ರಿಂದ ಏಪ್ರಿಲ್ 19 ರವರೆಗೆ ಗಣಪತಿ ಕೆರೆ ದಡದಲ್ಲಿ ಬೃಹತ್ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ. ಸಾಗರ ತಾಲೂಕಿನಲ್ಲಿ ಅತ್ಯಂತ ಸಂಭ್ರಮದಿಂದ ನಡೆಯುವ ಈ ಜಾತ್ರೆಯಲ್ಲಿ ಮುಸ್ಲಿಂ ಅಂಗಡಿಗಳಿಗೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್ ಸಾಗರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದೆ.ಶಿವಮೊಗ್ಗ ನಗರದ ಶ್ರೀ ಕೋಟೆ ಮಾರಿಕಾಂಬಾ ಜಾತ್ರೆಯ ಸಂದರ್ಭದಲ್ಲಿ ಮುಸ್ಲಿಂ ಒಡೆತನದ ಅಂಗಡಿಗಳಿಗೆ ಅನುಮತಿ ನೀಡಿಲ್ಲ. ಈಗ ಮಹಾ ಗಣಪತಿ ಜಾತ್ರೆಯಲ್ಲೂ ಇದೇ ರೀತಿಯ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಆಗ್ರಹಿಸಿದೆ.