ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಹೋಗುತ್ತಿದ್ದ ಕಾರ್ ತಡೆದು ನಮ್ಮ ಗ್ರಾಮಕ್ಕೆ ಬಸ್ ಬಿಡುವಂತೆ ಶಾಲಾ ವಿದ್ಯಾರ್ಥಿನಿಯರು ಮನವಿ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮಕ್ಕೆ ಬೊಮ್ಮಾಯಿ ಅವರು ಶನಿವಾರ(ಇಂದು) ಆಗಮಿಸಿದ್ದರು. ಈ ವೇಳೆ ಬೊಮ್ಮಾಯಿ ಅವರು ಗ್ರಾಮದ ಮಲಿಯಮ್ಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ದೇವಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವಿಯ ದರ್ಶನ ಪಡೆದ ನಂತರ ಗ್ರಾಮದಲ್ಲಿ ಕಂದಾಯ ದಾಖಲೆಗಳು ಮನೆಮನೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ತಿಮ್ಮಾಪುರ ಗ್ರಾಮದ ವಿದ್ಯಾರ್ಥಿನಿಯರ ಗುಂಪೊಂದು ಅವರ ಕಾರನ್ನು ತಡೆದು ನಮ್ಮ ಗ್ರಾಮಕ್ಕೆ ಬಸ್ ಬಿಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಈ ವೇಳೆ ವಿದ್ಯಾರ್ಥಿನಿಯರು, ಬಸ್ ಇಲ್ಲದ ಕಾರಣ ನಾವು ಶಾಲೆಗೆ ಪ್ರತಿದಿನ ತೀರ್ಥ ಗ್ರಾಮದಿಂದ ನಾಲ್ಕೈದು ಕಿ.ಮೀ ನಡೆದುಕೊಂಡು ಹೋಗಬೇಕಾಗುತ್ತದೆ. ಇದರಿಂದ ನಮಗೆ ತುಂಬಾ ತೊಂದರೆಯಾಗುತ್ತಿದೆ. ಅದಕ್ಕೆ ನೀವು ನಮ್ಮ ಗ್ರಾಮಕ್ಕೆ ಬಸ್ ಬಿಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಬೊಮ್ಮಾಯಿ ಅವರು ವಿದ್ಯಾರ್ಥಿನಿಯರ ಮನವಿ ಸ್ವೀಕರಿಸಿದ್ದು, ಅವರ ತಲೆ ಮೇಲೆ ಕೈ ಇಟ್ಟು ಬಸ್ ಬಿಡಿಸುವ ಭರವಸೆ ನೀಡಿದ್ದಾರೆ.
Laxmi News 24×7