Breaking News

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

Spread the love

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್‌ಎಸ್‌ಎಲ್ಸಿ ಪರೀಕ್ಷೆ ಇಂದಿನಿಂದ ಆರಂಭವಾಗಲಿದೆ.

ಸಮವಸ್ತ್ರ ಧರಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೊಠಡಿಗೆ ಅವಕಾಶ ನೀಡುವುದಿಲ್ಲ.

ಕನಿಷ್ಠ ಒಂದು ಗಂಟೆಗೆ ಮೊದಲೇ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಿ ಮೊದಲ ದಿನ ನಡೆಯಲಿರುವ ಪ್ರಥಮ ಭಾಷೆ ಪರೀಕ್ಷೆಯನ್ನು ಎದುರಿಸಿ.

ಈ ಬಾರಿ 8,73,846 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3444 ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರ ವರೆಗೆ, ಕೋರ್ ವಿಷಯಗಳ ಪರೀಕ್ಷೆಗಳು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ, ಬಿಎಂಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಚಾರ ದಟ್ಟಣೆಯಿಂದ ಪರೀಕ್ಷಾ ಕೇಂದ್ರ ತಲುಪುವುದು ತಡವಾಗಬಹುದು. ಬೇಗನೇ ಮನೆಯಿಂದ ಹೊರಡಿ, ಪರೀಕ್ಷೆಯನ್ನು ಎದುರಿಸುವ ಎಲ್ಲ ಮಕ್ಕಳಿಗೆ ಶುಭವಾಗಲಿ.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ