Breaking News

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ  ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿದ್ದಪ್ಪ  ಓ. ಹಲಸಗಿ (53)  ನಿಧನ

Spread the love

ಬೆಳಗಾವಿ – ಕೊರೋನಾದಿಂದಾಗಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ  ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಿದ್ದಪ್ಪ  ಓ. ಹಲಸಗಿ (53)  ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ಕುಟುಂಬದವರಿಗೂ ಸೋಂಕು ತಗುಲಿರುವುದಾಗಿ ಗೊತ್ತಾಗಿದೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಕುರಿತು ಪ್ರಗತಿವಾಹಿನಿ ಈ ಹಿಂದೆಯೇ ವರದಿ ಪ್ರಕಟಿಸಿತ್ತು.

ಹಲವು ದಶಕಗಳ ಸುದೀರ್ಘ ಶೈಕ್ಷಣಿಕ ಜೀವನದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದ  ಸಿದ್ದಪ್ಪ  ಓ. ಹಲಸಗಿ  ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ತಮ್ಮ ವೃತ್ತಿಯನ್ನು ಪ್ರಾರಂಭಿಸಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ  ಎನ್ಎಸ್ಎಸ್ ವಿಭಾಗ ಅಧ್ಯಕ್ಷರಾಗಿದ್ದರು ಹಾಗೂ ಎರಡು ವರ್ಷಗಳ ಕಾಲ ಸಂಗೊಳ್ಳಿ ರಾಯಣ್ಣ ಸರ್ಕಾರಿ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು.

ಈವರೆಗೆ ಸುಮಾರು 45ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ ಹಾಗೂ 20 ಟೆಕ್ಸ್ಟ್ ಬುಕ್ ಗಳನ್ನು ಬರೆದಿದ್ದಾರೆ. ಹೆಂಡತಿ, ಒಬ್ಬ ಮಗ, ಒಬ್ಬಳು ಮಗಳು ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ