ಮೈಸೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಅನುಶ್ರೀ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿನಿ.
ಪರೀಕ್ಷೆ ಬರೆಯುತ್ತಿದ್ದ ವೇಳೆ ಅನುಶ್ರೀ ಹಠಾತ್ ಕುಸಿದು ಬಿದ್ದಿದ್ದಾಳೆ. ಕೂಡಲೇ ಪರೀಕ್ಷಾ ಸಿಬ್ಬಂದಿ ಆಕೆಯನ್ನ ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಅನ್ನೋ ಮಾಹಿತಿ ಲಭ್ಯವಾಗಿದೆ.
Laxmi News 24×7