ಬೆಂಗಳೂರು: ಪ್ರೀತಿ ನಿರಾಕರಿಸಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡು ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ 25 ವರ್ಷದ ಅರುಣ್ ಎಂಬ ಯುವಕ ಈ ರೀತಿ ನೇಣಿಗೆ ಶರಣಾಗಿದ್ದಾನೆ. ಮದುವೆ ಆಗುವಂತೆ ಅರುಣ್ ಯುವತಿಯ ಬೆನ್ನು ಬಿದ್ದಿದ್ದ, ಆದ್ರೆ ಯುವತಿ ವಿವಾಹವಾಗಲು ನಿರಾಕರಿಸಿದ್ದಾಳೆ.
ಇದರಿಂದ ಮನನೊಂದು ಮನೆಯಲ್ಲಿಯೇ ಅರುಣ್ ನೇಣಿಗೆ ಶರಣಾಗಿದ್ದಾನೆ. ಇನ್ನು ರಾಮಮೂರ್ತಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆಯನ್ನ ನಡೆಸಿದ್ದಾರೆ.