Breaking News

ಶಿವಕುಮಾರ ಸ್ವಾಮೀಜಿ ಜಯಂತೋತ್ಸವಕ್ಕೆ ತುಮಕೂರಿಗೆ ರಾಹುಲ್‌ ಗಾಂಧಿ: ಹಿರಿಯ ನಾಯಕರೊಂದಿಗೆ ಸಭೆ

Spread the love

ತುಮಕೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಮುಗ್ಗರಿಸಿರುವ ಕಾಂಗ್ರೆಸ್‌ ಇದೀಗ ಪಕ್ಷವನ್ನ ಸಂಘಟಿಸಲು ತೊಡೆ ತಟ್ಟಿ ನಿಂತಿದೆ. ಈ ನಿಟ್ಟಿನಲ್ಲಿ ಮಾರ್ಚ್‌ 31ರಂದು ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಾರ್ಚ್‌31 ನಡೆದಾಡುವ ದೇವರು, ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತೋತ್ಸವ ಹಿನ್ನೆಲೆಯಲ್ಲಿ ತುಮಕೂರಿಗೆ ಭೇಟಿ ನೀಡಲಿದ್ದಾರೆ.

ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಸಿದ್ದಲಿಂಗೇಶ್ವರನಿಗೂ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅಲ್ಲಿಯೇ ಪ್ರಸಾದ ಸ್ವೀಕರಿಸಿ ಆನಂತರ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಬರಲಿದ್ದಾರೆ. ಏಪ್ರಿಲ್ 1ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಿರಿಯ ನಾಯಕರ ಸಭೆ ನಡೆಯಲಿದೆ. ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ನಾಯಕರೂ ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆ ಬಳಿಕ ಸದಸ್ಯತ್ವ ನೋಂದಣಿ ವಿಚಾರವಾಗಿ ಜೂಮ್ ಮೀಟಿಂಗ್ ನಡೆಯಲಿದ್ದು, ಸಮಯ ಇದ್ದರೆ ಹಿರಿಯ ನಾಯಕರ ಜತೆ ರಾಹುಲ್ ಗಾಂಧಿ ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ