Breaking News

ಕಾಂಗ್ರೆಸ್ ಗೆ ಸಿದ್ದು ಅನಿವಾರ್ಯ.. ಅವರಿಲ್ಲ ಎಂದರೆ ಪಕ್ಷವೇ ಇಲ್ಲ ಎಂದರ್ಥ :ಕೆ.ಎನ್. ರಾಜಣ್ಣ

Spread the love

ತುಮಕೂರು : ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಸ್ ಲೀಡರ್, ಅವರ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಕೆ ಎನ್ ರಾಜಣ್ಣ ಆಚರಿ ಹೇಳಿಕೆಯನ್ನು ನೀಡಿದ್ದಾರೆ .

 

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇದೆ ಅದರಂತೆ ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪ್ರಮುಖ ನಾಯಕರು ಎಂದು ಮಾಜಿ ಶಾಸಕ ಕೆ. ಎನ್ ರಾಜಣ್ಣ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅನಿವಾರ್ಯತೆ ಹೆಚ್ಚಿದೆ ರಾಜ್ಯದಲ್ಲಿ ಯಡಿಯೂರಪ್ಪ ಇಲ್ಲ ಎಂದರೆ ಬಿಜೆಪಿ ಇರಲ್ಲ, ಮಾಜಿ ಪ್ರಧಾನಿ ದೇವೇಗೌಡರವರು ಇಲ್ಲ ಎಂದರೆ ಜೆಡಿಎಸ್ ಇರಲ್ಲ ಅದರಂತೆ ರಾಜ್ಯದಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯನವರು ಸ್ವಾಮೀಜಿಗಳಿಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗೆ ಉತ್ತರಿಸಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಕೂಡ ಪ್ರಮುಖ ನಾಯಕರು ಇನ್ನೂ ಸಿದ್ದರಾಮಯ್ಯನವರ ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ಅವರು ಸ್ಪಷ್ಟನೆ ಕೂಡ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಸ್ವಾಮಿಗಳನ್ನು ದೇವರಂತೆ ನೋಡುತ್ತಾರೆ ಇನ್ನೂ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಸಹ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ ಸ್ವಾಮೀಜಿಗಳಿಗೆ ಅಗೌರವ ತರುವ ಕೆಲಸವನ್ನು ಯಾವ ನಾಯಕರು ಮಾಡುವುದಿಲ್ಲ ಎಂದರು


Spread the love

About Laxminews 24x7

Check Also

ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ

Spread the love ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ