Breaking News

ನಟಿ ರಾಗಿಣಿಗೆ ನೋಟಿಸ್ – ಆಪ್ತನನ್ನು ವಶಕ್ಕೆ ಪಡೆದ ಸಿಸಿಬಿ

Spread the love

ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್‍ನ ನಟಿ ರಾಗಿಣಿಯವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್‍ಟಿಒ ಅಧಿಕಾರಿ ರವಿಶಂಕರ್ ನನ್ನು ಕಚೇರಿಗೆ ಕರೆತಂದ ವಿಚಾರಣೆ ಮಾಡಿ ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆಯ ನಂತರ ರಾಗಿಣಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬಂದು ವಿಚಾರನೆ ಹಾಜರಾಗುವಂತೆ ಸೂಚಿಸಿದ್ದಾರೆ

ಗೆಳೆಯರ ಮಧ್ಯೆ ನಡೆದಿತ್ತು ಗಲಾಟೆ:
ಬೆಂಗಳೂರಿನ ಖಾಸಗಿ ಹೋಟೆಲ್ ರಿಟ್ಜ್ ಕಾರ್ಲ್ ಟನ್ ನಲ್ಲಿ ರಾಗಿಣಿ ಅವರ ಗೆಳೆಯರಾದ ಉದ್ಯಮಿ ಶಿವಪ್ರಕಾಶ್ ಚಿಪ್ಪಿ ಹಾಗೂ ಆರ್ ಟಿಒ ಅಧಿಕಾರಿ ರವಿಶಂಕರ್ ಕಿತ್ತಾಡಿಕೊಂಡಿದ್ದರು. 2019ರ ಮಾರ್ಚ್ 16 ಶನಿವಾರ ರಾತ್ರಿ ಹೋಟೆಲ್ ನಲ್ಲಿ ಶಿವಪ್ರಕಾಶ್ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ನಟಿ, ತಮ್ಮ ಗೆಳೆಯ ರವಿಶಂಕರ್ ಜೊತೆ ಹೋಟೆಲ್‍ಗೆ ತೆರಳಿದ್ದರು. ಇದನ್ನು ಕಂಡ ಶಿವಪ್ರಕಾಶ್, ರವಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದರು. ಇಬ್ಬರ ನಡುವೆ ಆರಂಭವಾದ ಜಗಳ ತಾರಕಕ್ಕೇರಿ ಬಳಿಕ ಬಿಯರ್ ಬಾಟಲಿಯಿಂದ ಪರಸ್ಪರ ಬಡಿದಾಡಿಕೊಂಡಿದ್ದರು

ಘಟನೆಯಿಂದ ಗಾಯಗೊಂಡ ಬಳಿಕ ರವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅಶೋಕ ನಗರ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ರವಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್‍ಐಆರ್ ದಾಖಲಿಸಿ ಶಿವಪ್ರಕಾಶ್ ರನ್ನು ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿತ್ತು. ಇವರಿಬ್ಬರು ರಾಗಿಣಿ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಆದರೆ ಈಗ ರಾಗಿಣಿ ಈ ವಿಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ