Breaking News

ತರ ಹೆಸರಿಗೇ ಉಳುವ ಭೂಮಿ : ಸರ್ಕಾರದಿಂದ ಮಹತ್ವದ ನಿರ್ಧಾರ

Spread the love

ಬೆಂಗಳೂರು, ಮಾ.31- ಹಲವಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯ ಕೆ.ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ ಭಾಗದಲ್ಲಿ ಕುಮ್ಕಿ ಭಾಣಿ ಭೂಮಿಗಳಿವೆ, ಉತ್ತರ ಕನ್ನಡ ಜಿಲ್ಲಾಯಲ್ಲಿ ಬೆಟ್ಟ, ಹಾಡಿಗಳಿವೆ, ಮೈಸೂರು ಭಾಗದಲ್ಲಿ ಕಾನು ಮತ್ತು ಸೊಪ್ಪಿನ ಬೆಟ್ಟ ಭೂಮಿಗಳು, ಕೊಡಗಿನಲ್ಲಿ ಜಮ್ಮಾ ಮತ್ತು ಬಾಣಿ, ಹೈದರಾಬಾದ್ ಪ್ರದೇಶದಲ್ಲಿ ತರಿಗ ಭೂಮಿಗಳ ಬಗೆಗಿನ ವಿಶೇಷಾಕಾರಿಗಳನ್ನು ಮುಂದುವರೆಸಲು ನಿರ್ಧರಿಸಲಾಗಿದೆ ಎಂದರು.

ಬ್ರಿಟಿಷರ ಕಾಲದಿಂದಲ್ಲೂ ರೈತರು ಇಲ್ಲಿ ಉಳುಮೆ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ರೈತರಿಗೆ ಭೂಮಿ ನೀಡುವಂತೆ ಸೂಚನೆ ನೀಡಿದೆ. ರಾಜ್ಯಾದ್ಯಂತ ಈ ರೀತಿ ಲಕ್ಷಾಂತರ ಎಕರೆ ಭೂಮಿ ಇದೆ. ಚಿಕ್ಕಮಗಳೂರಿನಲ್ಲಿ 45 ಸಾವಿರ ಎಕರೆ, ಹಾಸನದಲ್ಲಿ 35 ಎಕರೆ ಇದೆ. ಇದರಿಂದ ಸರ್ಕಾರಕ್ಕೂ ಆದಾಯ ಬರುತ್ತಿಲ್ಲ. ರೈತರಿಗೂ ಇಲ್ಲ ಎಂಬಂತಾಗಿದೆ. ಅದಕ್ಕಾಗಿ ಈ ಭೂಮಿಗಳನ್ನು ಉಳುಮೆ ಮಾಡುತ್ತಿದ್ದ ರೈತರಿಗೆ ನೀಡಬೇಕು ಎಂಬ ಮನಸ್ಥಿತಿಯಲ್ಲಿ ನಮ್ಮ ಸರ್ಕಾರ ಇದೆ ಎಂದರು.ಮೊನ್ನೆ ಸಂಪುಟದಲ್ಲಿ ಈ ವಿಷಯ ಚರ್ಚೆಸಲಾಗಿದೆ. ನನ್ನ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ. ಆ ಸಮಿತಿ ಸಭೆ ನಡೆಸಿ, ಕಾನೂನು ಪ್ರಕಾರ ರೈತರಿಗೆ ಭೂಮಿಯನ್ನು ನೀಡಲು ಪರಿಶೀಲನೆ ನಡೆಸಲಿದೆ. ಮಲೆನಾಡು ಭಾಗದ ಭೂಮಿಯನ್ನು ಭೋಗ್ಯದ ಆಧಾರದ ಮೇಲೆ ನೀಡಲು ಪರಿಶೀಲಿಸಲಾಗುತ್ತಿದೆ. ಅದಕ್ಕೆ ರೈತರಿಂದ ಎಷ್ಟು ಹಣ ಸಂಗ್ರಹಿಸಬೇಕು ಎಂಬ ಬಗ್ಗೆ ನಾನೇ ಖುದ್ದಾಗಿ ಮಲೆನಾಡು, ಚಿಕ್ಕಮಗಳೂರು ಹಾಗೂ ಇತರ ಪ್ರದೇಶಗಳಿಗೆ ಹೋಗಿ ರೈತರ ಜೊತೆ ಸಮಾಲೋಚನೆ ಮಾಡುತ್ತೇನೆ ಎಂದರು.  ಗೋಮಾಳ ಭೂಮಿಯನ್ನು ಉಳಿಸಿಕೊಳ್ಳುವ ಮನಸ್ಥಿತಿ ನಮ್ಮದು. ನೈಜವಾದ ರೈತರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.


Spread the love

About Laxminews 24x7

Check Also

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ

Spread the loveಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ