Breaking News

ಬಿಜೆಪಿ ಶಾಸಕ ರೇಣುಕಾಚಾರ್ಯಗೆ ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಬೆದರಿಕೆ ,

Spread the love

ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇಂದು ಬೆಳಗ್ಗೆಯಿಂದ ಅಪರಿಚಿತ ನಂಬರ್‌ನಿಂದ ಪದೇ ಪದೇ ಕರೆ ಬರ್ತಿತ್ತು. ಸಂಜೆ ವೇಳೆಗೆ ಕಾಲ್ ರಿಸಿವ್ ಮಾಡಿದ ಶಾಸಕ ರೇಣುಕಾಚಾರ್ಯಗೆ ವ್ಯಕ್ತಿಯು ಏಕಾಏಕಿ ಅವಾಚ್ಯ ಪದಗಳಿಂದ ನಿಂದಿಸಲು ಶುರು ಮಾಡಿದ್ದಾನೆ. ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಅಂತಾ ಬೆದರಿಕೆ ಹಾಕಿದ್ದಾನೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳ ನಿಷೇಧ, ಹಲಾಲ್ ಕಟ್ ವಿಚಾರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಜನರನ್ನು ಎತ್ತಿಕಟ್ಟುತ್ತಿದ್ದೀರಿ. ಇಷ್ಟು ದಿನ ಇಲ್ಲದ ಈ ವಿಚಾರಗಳು ನೀವು ಬಂದ ಮೇಲೆ ಶುರುವಾಗಿದೆ. ಮುಂದಿನ ದಿನಗಳಲ್ಲಿ ನಿಮ್ಮ ಬಿಜೆಪಿ ನಾಯಕರ ಕಥೆ ಏನಾಗಲಿದೆ ನೋಡ್ತಿರಿ ಎಂದಿದ್ದಾನೆ. 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ