Breaking News

ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ಇ – ಸ್ವತ್ತು ಮೂಲಕ ಫಲಾನುಭವಿಗೆ ಖಾತೆ

Spread the love

ಬೆಂಗಳೂರು: ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ ಇ -ಸ್ವತ್ತು ಮೂಲಕ ಖಾತೆ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿ, ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರಿಗೆ 94c ಮತ್ತು 94cc ಅಡಿಯಲ್ಲಿ ನೀಡಿದ ಹಕ್ಕುಪತ್ರಗಳ ನೋಂದಣಿಯ ನಂತರ ಇ – ಸ್ವತ್ತು ಅಥವಾ ಇ -ಖಾತಾ ವ್ಯವಸ್ಥೆಯ ಮೂಲಕ ಖಾತೆ ಚೆಕ್ಕುಬಂದಿ ಮಾಡಿಕೊಡಲು ಚಿಂತಿಸಲಾಗಿದೆ ಎಂದು ಹೇಳಿದ್ದಾರೆ.

 

94c ಮತ್ತು 94cc ಅಡಿಯಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ಒಂದು ವರ್ಷದ ವರೆಗೆ ವಿಸ್ತರಿಸಲಾಗಿದೆ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು. ಇದುವರೆಗೆ 94ಸಿ ಅಡಿ 1,53,197 ಮಂದಿಗೆ ಹಕ್ಕುಪತ್ರ ನೀಡಲಾಗಿದೆ. 42,170 ಅರ್ಜಿಗಳು ಬಾಕಿ ಇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ

Spread the loveಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ