ರಾಮನಗರ: ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಬೊಮ್ಮಾಯಿಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ.
ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ಪರಿಷತ್, ಭಜರಂಗದಳದವರು ಕಿಡಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿದೆಯಾ? ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು ಅದೇ ಸಮಾಜದವರೇ ಬರಬೇಕು. ಈಗ ಹಲಾಲ್ – ಜಟ್ಕಾ ಕಟ್ ಅಂತಿದ್ದಾರೆ. ನಿಮ್ಮ ಜಟ್ಕಾ ಮಾಡುವುದಕ್ಕೆ, ಇನ್ನೊಂದು ಮಾಡುವುದಕ್ಕೂ ಅವರೇ ಬರಬೇಕು. ರೇಷ್ಮೆ, ಮಾವು ಬೆಳೆ ಮಾರಾಟಕ್ಕೆ ಈ ಪೋಲಿಸರು ಬರ್ತಾರಾ? ಅಕಾಲಿಕ ಮಳೆಯಿಂದಾಗಿ ಮಾವು ನಷ್ಟವಾಗಿದೆ. ಅದನ್ನು ಖರೀದಿ ಮಾಡಲು ಆ ಸಮಾಜದವರೇ ಬರಬೇಕು. ವಿಶ್ವ ಹಿಂದೂ ಪರಿಷತ್‍ನವರು ಭಜರಂಗದಳದವರು ಇವರ ಹೊಟ್ಟೆ ಮೇಲೆ ಹೊಡೆಯಲು, ದೇಶ ಹಾಳು ಮಾಡುವುದಕ್ಕೆ ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ.