ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮಾಡಿರುವ ಟ್ವಿಟ್ ವಾಪಸ್ಸು ಅವರ ಬುಡಕ್ಕೆ ಬಂದಿದೆ. ನಿರ್ದೇಶಕ ರಾಜಮೌಳಿ ಅವರನ್ನು ಕಾಲೆಳೆಯಲು ಹೋಗಿ, ಅಭಿಮಾನಿಗಳಿಂದ ತಾವೇ ಕಾಲೆಳಿಸಿಕೊಂಡಿದ್ದಾರೆ ವರ್ಮಾ.ರಾಜಮೌಳಿ, ಜೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಮೂವರು ಇರುವ ಫೋಟೋವೊಂದನ್ನು ಹಾಕಿ, ‘ರಾಜಮೌಳಿ ಸರ್, ನಿಮ್ಮೊಂದಿಗೆ ಇಬ್ಬರು ಡೇಂಜರ್ಸ ಗಂಡಸರಿದ್ದರೆ, ನನ್ನ ಹತ್ತಿರ ಡೇಂಜರ್ಸ್ ಹುಡುಗಿಯರು ಇದ್ದಾರೆ’ ಎಂದು ಬರೆದು ಟ್ವಿಟ್ ಮಾಡಿದ್ದಾರೆ. ಆ ಹುಡುಗಿಯರು ಯಾರು ಎನ್ನುವುದನ್ನೂ ಬಹಿರಂಗ ಪಡಿಸಿದ್ದಾರೆ.
ಸದ್ಯ ರಾಮ್ ಗೋಪಾಲ್ ವರ್ಮಾ ‘ಖತ್ರಾ ಡೇಂಜರಸ್’ ಎನ್ನುವ ಸಿನಿಮಾ ಮಾಡಿದ್ದಾರೆ. ಅದು ಭಾರತೀಯ ಸಿನಿಮಾ ರಂಗದಲ್ಲಿ ಬರುತ್ತಿರುವ ಮೊದಲ ಲೆಸ್ಬಿಯನ್ ಚಿತ್ರ. ನೈನಾ ಮತ್ತು ಅಪ್ಸರಾ ಲೆಸ್ಬಿಯನ್ ಗಳಾಗಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇವರನ್ನೇ ವರ್ಮಾ ಡೇಂಜರಸ್ ಹುಡುಗಿಯರು ಎಂದು ಹೇಳಿಕೊಂಡಿದ್ದಾರೆ. ಮುಂದಿನ ತಿಂಗಳು ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕಾಗಿ ವರ್ಮಾ ಬೆಂಗಳೂರಿಗೆ ಕೂಡ ಬಂದಿದ್ದರು.