Breaking News

ಪಾಕ್‌ ಪರ ಘೋಷಣೆ ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು

Spread the love

ಅಲಹಾಬಾದ್: ಟಿ20 ಕ್ರಿಕೆಟ್‌ ವಿಶ್ವಕಪ್‌ ಪಂದ್ಯದಲ್ಲಿ ಭಾರತದ ವಿರುದ್ಧ ಜಯಗಳಿಸಿದ್ದ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದ ಕಾಶ್ಮೀರದ ಮೂವರು ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ನೀಡಿದೆ ಎಂದು ವರದಿಯಾಗಿದೆ.

ಆಗ್ರಾ ಜಿಲ್ಲಾ ವಕೀಲರ ಸಂಘವು ವಿದ್ಯಾರ್ಥಿಗಳ ಪರವಾಗಿ ವಾದ ಮಂಡಿಸುವುದರ ವಿರುದ್ಧ ನಿರ್ಣಯ ಅಂಗೀಕರಿಸಿದ ಬಳಿಕ ಆರೋಪಿತ ವಿದ್ಯಾರ್ಥಿಗಳು 2021ರ ಡಿಸೆಂಬರ್‌ನಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆಗ್ರಾದಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಅರ್ಷೀದ್ ಯೂಸುಫ್, ಇನಾಯತ್ ಅಲ್ತಾಫ್ ಶೇಖ್ ಮತ್ತು ಶೋಕತ್ ಅಹ್ಮದ್ ಗನೈ ಎಂಬ ಮೂವರು ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶ ಪೊಲೀಸರು ಅಕ್ಟೋಬರ್ 27 ರಂದು ಬಂಧಿಸಿದ್ದರು.

ಇವರ ವಿರುದ್ಧ ಸೆಕ್ಷನ್‌ 124ಎ (ದೇಶದ್ರೋಹ), 153-ಎ (ಭಿನ್ನ ಗುಂಪುಗಳ ನಡುವೆ ವೈರತ್ವಕ್ಕೆ ಪ್ರಚಾರ), 505 (1) (B) (ಸಾರ್ವಜನಿಕ ಕಿಡಿಗೇಡಿತನ) ಹಾಗೂ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ 66-ಎಫ್‌ ಅಡಿ ಪ್ರಕರಣ ದಾಖಲಿಸಲಾಗಿತ್ತು. 


Spread the love

About Laxminews 24x7

Check Also

ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ

Spread the love ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ