ಗಣೇಶ್ ಮತ್ತು ಪ್ರೀತಂ ಗುಬ್ಬಿ ಕಾಂಬಿನೇಷನ್ ನಲ್ಲಿ ಮತ್ತೊಂದು ಹೊಸ ಸಿನಿಮಾ ಬರಲಿದೆ ಎಂದು ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿ ಬ್ರೇಕ್ ಮಾಡಿತ್ತು. ಇದೀಗ ಆ ಸಿನಿಮಾದ ಟೈಟಲ್ ಲಾಂಚ್ ಗೆ ಸಿದ್ಧತೆ ನಡೆದಿದೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ತಮ್ಮ ಹೊಸ ಸಿನಿಮಾದ ಶೀರ್ಷಿಕೆ ರಿವಿಲ್ ಮಾಡುವುದಾಗಿ ಸ್ವತಃ ಗಣೇಶ್ ಅವರೇ ಟ್ವಿಟ್ ಮಾಡಿದ್ದಾರೆ.
ನವ ಸಂವತ್ಸರ ಯುಗಾದಿಯಂದು ಹೊಸ ಚಿತ್ರದ ಟೈಟಲ್ ಲಾಂಚ್. ನಾನು, ಪ್ರೀತಮ್ ಗುಬ್ಬಿ ಮುಂಗಾರು ಮಳೆಯಿಂದ ಸಿನಿ ಪಯಣದಲ್ಲಿ ಜೊತೆಯಾದವರು. ನಮ್ಮ ಜೋಡಿಯ ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ ಮತ್ತು 99 ಚಿತ್ರಗಳನ್ನು ನೋಡಿ ತಾವು ಹರಿಸಿದ್ದೀರಿ. ಈಗ ಶ್ರೀವಾರಿ ಟಾಕೀಸ್ ನೊಂದಿಗೆ ಮತ್ತೊಂದು ಹೊಸ ಕನಸಿನ ಪಯಣ ಪ್ರಾರಂಭ. ಹರೆಯದ ಹೃದಯಗಳೇ ಹರಸಿ’ ಎಂದು ಗಣೇಶ್ ಹೊಸ ಸಿನಿಮಾದ ಬಗ್ಗೆ ಬರೆದುಕೊಂಡಿದ್ದಾರೆ.ಗಣೇಶ್ ಮತ್ತು ಪ್ರೀತಮ್ ಕಾಂಬಿನೇಷನ್ ನ ‘99’ ಸಿನಿಮಾದ ನಂತರ ಈ ಹೊಸ ಸಿನಿಮಾ ಲಾಂಚ್ ಆಗುತ್ತಿದೆ. ಈ ಕಾಂಬಿನೇಷನ್ ನಲ್ಲಿ ಈವರೆಗೂ ಲವ್ ಸ್ಟೋರಿಗಳನ್ನೇ ಸಿನಿಮಾ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಹೊಸ ಸಿನಿಮಾದಲ್ಲೂ ಪ್ರೇಮಕಥೆಯೇ ಇರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 2 ರಂದು ಕೆಲವು ಸುದ್ದಿಗಳು ಹೊರ ಬೀಳಲಿವೆ.